ಪ್ರೌಢಶಾಲಾ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ
ಮೈಸೂರು: ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಫೆ. 16 ರಂದು ಪ್ರಕಟಿಸಿದ್ದು, ಜೇಷ್ಠತಾ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಿರುವ ಶಿಕ್ಷಕರು, ಮುಖ್ಯೋಪಾಧ್ಯಾಯರ ಮೂಲಕ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಕ್ಷೇಪಣೆ ಸಲ್ಲಿಸಲು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕವು ತಿಳಿಸಿದೆ. ಜೇಷ್ಠತಾ ಪಟ್ಟಿಯಲ್ಲಿ ಶಿಕ್ಷಕರ ಜೇಷ್ಠತಾ ವಿವರ ಅಗತ್ಯವಿದ್ದಲ್ಲಿ ಸಂಜೆ 6 ರ ನಂತರ ಜಿಲ್ಲಾ ಕಚೇರಿಯಲ್ಲಿ ಮಾಹಿತಿ ಪಡೆಯುವುದು ಅಥವಾ ಮೊ. 9448208750, 8496839050 ಸಂಪರ್ಕಿಸಿಸಿ ಮಾಹಿತಿ ಪಡೆಯಬಹುದು ಎಂದು ಸಂಘದ ಅಧ್ಯಕ್ಷ ಸಿ.ಬಿ. ಅರುಣಕುಮಾರ, ಕಾರ್ಯದರ್ಶಿ ಎಸ್. ಸೋಮಶೇಖರ್ ಹೇಳಿದ್ದಾರೆ.
ಲಕ್ಷ್ಮೀದೇವಿ ಜಾತ್ರೆ
ಮೈಸೂರು: ತಾಲೂಕಿನ ಕೂಡನಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಲಕ್ಷೀದೇವಿ ಜಾತ್ರೆಯು ಮಾ. 2 ಮತ್ತು 3 ರಂದು ನಡೆಯಲಿದೆ. ಮಾ. 3ರ ರಾತ್ರಿ 10 ಕ್ಕೆ ದಕ್ಷಯಜ್ಞ ಪೌರಾಣಿಕ ನಾಟಕ ನಡೆಯಲಿದೆ ಎಂದು ಬಸವೇಶ್ವರ ಯುವಕರ ಸಂಘದ ಅಧ್ಯಕ್ಷ ಕೆ.ಎಂ. ಶಂಕರ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.