ಭ್ರಷ್ಟ ಕುಲಪತಿಗಳ ವಿರುದ್ಧ ಕ್ರಮಕ್ಕೆ ಕಾನೂನಿಗೆ ತಿದ್ದುಪಡಿ: ಸಿ.ಟಿ. ರವಿ
ಮೈಸೂರು: ಭ್ರಷ್ಟ ಕುಲಪತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ತಿದ್ದುಪಡಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದರು. ನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಶುಕ್ರವಾರ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ವಿಶ್ವವಿದ್ಯಾನಿಲಯಗಳಿಗೆ ಭ್ರಷ್ಟರು ನೇಮಕವಾಗುತ್ತಿದ್ದಾರೆ ಎಂಬ ಆರೋಪ ಇದೆ. ಈ ಸಂಬಂಧ ಹಿಡಿತ ಸಾಧಿಸಲು ಅಗತ್ಯವಿರುವ ಕಾನೂನು ತಿದ್ದುಪಡಿ ಮತ್ತು ಕಾಯ್ದೆಯೊಂದನ್ನು ಜಾರಿಗೆ ತರಲಾಗುತ್ತಿದೆ. ಈ ಕಾಯ್ದೆಗೆ ವಿಧಾನಸಭೆಯ ಅಂಗೀಕಾರ ದೊರೆತಿದೆ. ರಾಜ್ಯಪಾಲರ ಸಹಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿಗೆ ಅಧಿಕಾರ: ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ. ಸಂಕೇಶ್ವರದಲ್ಲಿ 11 ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಟಿ. ನರಸೀಪುರ ಪಪಂ ಮತ್ತು ಬನ್ನೂರು ಪುರಸಭೆ ಬಿಜೆಪಿಯ ವಶಕ್ಕೆ ಸಿಗುವ ಲಕ್ಷಣ ಇದೆ ಎಂದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ದೇವನೂರು ಪ್ರತಾಪ್, ಹೇಮಂತ್ ಕುಮಾರ್, ವಕ್ತಾರ ಭಾನುಪ್ರಕಾಶ್ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.