ಇಂದು ಸಂವಾದ
ಎಚ್.ಡಿ. ಕೋಟೆ: ತಾಲೂಕು ಪತ್ರಕರ್ತರ ಸಂಘದಲ್ಲಿ ಮಾ. 4ರ ಬೆಳಗ್ಗೆ 11.30ಕ್ಕೆ ಪಪಂ ಚುನಾವಣೆ ಹಿನ್ನೆಲೆ ಶಾಸಕ ಚಿಕ್ಕಣ್ಣ, ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಜೆಡಿಎಸ್ ತಾ. ಅಧ್ಯಕ್ಷ ಸಿ.ವಿ. ನಾಗರಾಜು, ಕೆಜೆಪಿ ಅಧ್ಯಕ್ಷ ಎಚ್.ಸಿ. ಶಿವಣ್ಣ, ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಮುಖಂಡರ ಜತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ ಸಂಘದ ಉಪಾಧ್ಯಕ್ಷ ಮಂಜು ತಿಳಿಸಿದ್ದಾರೆ.
ಶಾಲಾ ವಾರ್ಷಿಕೋತ್ಸವ
ಎಚ್.ಡಿ. ಕೋಟೆ: ತಾಲೂಕು ಚಿಕ್ಕೆರೆಯೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ಶಾಲಾ ವಾರ್ಷಿಕೋತ್ಸವನ್ನು ಶಾಸಕ ಚಿಕ್ಕಣ್ಣ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಶಾಲೆಗೆ ಬರುವ ವಿದ್ಯಾರ್ಥಿಗಳ ಪ್ರತಿಭೆಯು ವಿಕಸನಗೊಳ್ಳಲು ಬೇಕಾದ ಎಲ್ಲಾ ರೀತಿಯ ಸವಲತ್ತುಗಳು ಇದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹೊರ ಹಾಕಲು ಈ ಶಾಲೆಯ ಶಿಕ್ಷಕ ವೃಂದ ಪ್ರಯತ್ನಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಚಂದ್ರಶೇಖರ್ ಸ್ಫೂರ್ತಿ ಶಾಲಾ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು ಮಕ್ಕಳ ಉತ್ತಮ ಭವಿಷ್ಯ ರೂಪಿಸುತ್ತಿರುವ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಹಾಗೂ ಸಹ ಶಿಕ್ಷಕರನ್ನು ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮದ ಮುಖಂಡರು ಸನ್ಮಾನಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಮ್ಮೇಗೌಡ, ಪ್ರಾಥಮಿಕ ಬ್ಯಾಂಕ್ ಸದಸ್ಯ ಮುದ್ದಪ್ಪ, ಗ್ರಾಪಂ ಅಧ್ಯಕ್ಷ ರವಿ, ಶಿಕ್ಷಣ ಇಲಾಖೆಯ ಶಿವಮೂರ್ತಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾಮದ ಯಜಮಾನರು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.