ಜೆಡಿಎಸ್ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಿ: ಜಿಟಿಡಿ
ಹುಣಸೂರು: ಜೆಡಿಎಸ್ ಅಧಿಕೃತ ಅಭ್ಯರ್ಥಿಗಳ ಗೆಲವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕೆಂದು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಮನವಿ ಮಾಡಿದರು.
ಇಲ್ಲಿನ ಅದಿಚುಂಚಗಿರಿ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಅಧಿಕೃತ ಅಭ್ಯರ್ಥಿಗೆ ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿ ಗೆಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವ ಬಲಪಡಿಸುವಂತೆ ಮನವಿ ಮಾಡಿದರು.
ಜೆಡಿಎಸ್ ಬಂಡಾಯ ಅಭ್ಯರ್ಥಿಗಳಿಗೆ ಮಣೆ ಹಾಕಬೇಡಿ. ನಾಯಕರ ಮೇಲೆ ತಪ್ಪು ಮಾಹಿತಿ ನೀಡಿ ಮತ ಗಿಟ್ಟಿಸಲು ನಡೆಸುವ ಹುನ್ನಾರಕ್ಕೆ ತಲೆ ಹಾಕದೆ ಅಧಿಕೃತ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ಎಸ್. ಚಿಕ್ಕಮಾದು ಮಾತನಾಡಿ, ಇಂದಿನಿಂದಲ್ಲೆ ಎಲ್ಲಾ ಜೆಡಿಎಸ್ ಚುನಾಯಿತ ಪ್ರತಿನಿಧಿಗಳು ಪಟ್ಟಣದಲ್ಲಿ ವಾಸ್ತವ್ಯ ಹೂಡಿ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸುವಂತೆ ಮನವಿ ಮಾಡಿದರು.
ತಾ. ಘಟಕದ ಅಧ್ಯಕ್ಷ ಸ್ವಾಮಿಗೌಡ ಮಾತನಾಡಿದರು. ಜಿಪಂ ಸದಸ್ಯರಾದ ಸಿ.ಟಿ. ರಾಜಣ್ಣ, ದೇವರಾಜು, ತಾಪಂ ಅಧ್ಯಕ್ಷೆ ದೇವಕಿ ತಿಮ್ಮನಾಯ್ಕ, ಮುಖಂಡ ಜಿ.ಡಿ. ಹರೀಶ್ಗೌಡ, ಜಿಪಂ ಮಾಜಿ ಸದಸ್ಯರಾದ ತೋಂಡಾಳು ರಾಮಕೃಷ್ಣೇಗೌಡ, ಡಿ.ಕೆ. ಕುನ್ನೇಗೌಡ, ಎಚ್.ಎಂ. ಫಜಾಲುಲ್ಲಾ, ಉಷಾ ಚೆನ್ನಪ್ಪ, ಭಾಗ್ಯಮ್ಮ ಸುರೇಶ್, ಪುರಸಬೆ ಮಾಜಿ ಅಧ್ಯಕ್ಷ ಚಂದ್ರಶೇಖರ್, ರಮೇಶ್, ಹಜರತ್ ಜಾನ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.