ಜೆಡಿಎಸ್ ತೀವ್ರ ಪ್ರಚಾರ
ಮೈಸೂರು: ನಗರಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ತೆರೆದ ವಾಹನದಲ್ಲಿ ಬಹಿರಂಗ ಪ್ರಚಾರ ನಡೆಸಿದರು.
ನಗರಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಮಾಜಿ ಸಚಿವ ಜಿ.ಟಿ. ದೇವೇಗೌಡ ಮತ್ತು ಶಾಸಕ ಸಾ.ರಾ. ಮಹೇಶ್ ಮತ್ತು ಇತರರು ತೆರೆದ ವಾಹನದಲ್ಲಿ ಸಂಚರಿಸಿ, ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕಾರ ಅವಧಿಯ ಸಾಧನೆ ತಿಳಿಸಿ, ಕರಪತ್ರ ಹಂಚಿ ಮತಯಾಚಿಸಿದರು. ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ ಇತರರು ಇದ್ದರು.
ಕಾಂಗ್ರೆಸ್, ಕೆಜೆಪಿ: ಜೆ.ಪಿ. ನಗರದ 12ನೇ ವಾರ್ಡ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಖರ್ ಅವರು ಮನೆ ಮನೆಗೆ ತೆರಳಿ ಮತ ಯಾಚಿಸಿದರು. ವಿಶ್ವಾರಾಧ್ಯ ಮತ್ತು ಇತರರು ಇದ್ದರು.
ಕೆಜೆಪಿ ಮುಖಂಡ ಎಂ. ಅಪ್ಪಣ್ಣ 15ನೇ ವಾರ್ಡ್ನಲ್ಲಿ ಕೆಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಅವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಚೆನ್ನವೀರಪ್ಪ, ಮಮತ, ಶುಂಭುಪಟೇಲ್, ಸತೀಶ್, ನಾಗರಾಜ್, ಶಿವಕುಮಾರ್, ಗೋವಿಂದ ಮೊದಲಾದವರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.