'ಭಕ್ತಿಯಿಂದ ಮಾತ್ರ ದೇವರ ಓಲೈಕೆ'
ಸುತ್ತೂರು: ಭಕ್ತಿಯಿಂದ ಮಾತ್ರ ಭಗವಂತನನ್ನು ಓಲೈಸಿಕೊಳ್ಳಲು ಸಾಧ್ಯ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ನಂಜನಗೂಡು ತಾಲೂಕಿನ ಎಸ್. ಹೊಸಕೋಟೆಯಲ್ಲಿ ಭಾನುವಾರ ನಡೆದ ಗುರುಮಲ್ಲೇಶ್ವರ ಭಿಕ್ಷದ ಮಠದ ನವೀಕೃತ ಕಟ್ಟಡ ಮತ್ತು ನಂದಿದ್ವಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತೀಯ ಧಾರ್ಮಿಕ ಲೋಕದಲ್ಲಿ ಭಕ್ತಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಕ್ತಿಯಿಂದ ಭಗವಂತನನ್ನು ಓಲೈಸಿಕೊಳ್ಳಲು ಸಾಧ್ಯ. ಭಕ್ತಿ ಮಾರ್ಗದಿಂದ ಬದುಕಿದರೆ ಮಾನವ ಜನ್ಮ ಸಾರ್ಥಕವಾಗುತ್ತದೆ ಎಂದರು.
ಸಮಾರಂಭ ಉದ್ಘಾಟಿಸಿದ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಎಲ್ಲಾ ವರ್ಗದವರನ್ನು ಸಮಾನ ದೃಷ್ಟಿಯಿಂದ ಕಾಣುವ, ಸಮಾಜದ ಉದ್ಧಾರಕ್ಕಾಗಿ ಶ್ರಮಿಸುವ ಮಠಗಳು ಅಭಿವೃದ್ಧಿ ಆಗಬೇಕು ಎಂದರು.
ದೇವನೂರು ಮಠದ ಮಹಾಂತ ಸ್ವಾಮೀಜಿ, ಸಾಲೂರು ಮಠದ ಗುರುಶಾಂತ ಸ್ವಾಮೀಜಿ, ದಂಡಿಕೆರೆ ಶ್ರೀಗಳು, ಹಂಚೀಪುರದ ಚನ್ನಬಸವೇಶ್ವರ ಸ್ವಾಮೀಜಿ, ಬೆಟ್ಟದಪುರದ ಚೆನ್ನಬಸವೇಶ್ವರ ಸ್ವಾಮೀಜಿ, ಮುಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ಜಿಪಂ ಅಧ್ಯಕ್ಷ ಕಾ.ಪು. ಸಿದ್ಧವೀರಪ್ಪ, ಸದಸ್ಯ ಎಲ್. ಮಾದಪ್ಪ ಇದ್ದರು. ಶಾಲಾ ಶಿಕ್ಷಕರು ಪ್ರಾರ್ಥಿಸಿದರು. ಸುಂದರಪ್ಪ ಸ್ವಾಗತಿಸಿದರು. ಶಿವಮಲ್ಲಪ್ಪ ವಂದಿಸಿದರು. ಪ್ರಭುಸ್ವಾಮಿ ನಿರೂಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.