ರಂಗೇರುತ್ತಿದೆ ಚುನಾವಣಾ ಕಣ
ಮೈಸೂರು: ನಗರ ಪಾಲಿಕೆ ಚುನಾವಣಾ ಪ್ರಚಾರ ದಿನೆ ದಿನೆ ರಂಗೇರುತ್ತಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಚುನಾವಣಾ ಪ್ರಚಾರಕ್ಕೆ ಇಳಿದಿದ್ದರೆ, ನಗರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದರು.
ಅರಮನೆ ಸಮೀಪದ ಇಟ್ಟಿಗೆಗೂಡಿನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮೊದಲು ಪೂಜೆ ಸಲ್ಲಿಸಿದ ಸಿದ್ದರಾಮಯ್ಯ ಅವರು 65ನೇ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಪಂಕಜಾ ಅವರ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಕರಪತ್ರ ಹಂಚುತ್ತ ಮನೆ ಮನೆಗೆ ತೆರಳಿದರೆ ಹಿಂದಿನಿಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್ಗೆ ಮತ ಹಾಕುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಬಳಿಕ ತೆರೆದ ವಾಹನದಲ್ಲಿ ಸಿದ್ದರಾಮಯ್ಯ ಬಹಿರಂಗ ಪ್ರಚಾರ ನಡೆಸಿದರು. ಬ್ಯಾಂಡ್ ವಾದ್ಯದ ಹಿಮ್ಮೇಳದೊಂದಿಗೆ ಪ್ರಚಾರದ ಭರಾಟೆ ಹೆಚ್ಚಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.