ವಿದ್ಯಾರ್ಥಿಗಳ ಸಂಘ ವಜ್ರಮಹೋತ್ಸವ
ಮೈಸೂರು: ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಜ್ರಮಹೋತ್ಸವವು ಭಾನುವಾರ ಸಂಜೆ ನಡೆಯಿತು.
ಸಂಘದ ವಾರ್ಷಿಕ ಮಹಾಸಭೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿನ ಅನುಭವ ಮತ್ತು ಈಗಿನ ಸ್ಥಿತಿಯ ಕುರಿತು ವಿವರಿಸಿದರು.ಬಳಿಕ ಹಾಸ್ಯ ಭಾಷಣಕಾರ ಪ್ರೊ. ಎಂ. ಕೃಷ್ಣೇಗೌಡ ಅವರಿಂದ ಹಾಸ್ಯಗೋಷ್ಠಿ, ವಿವಿಧ ದೇಶಗಳ ವಿದ್ಯಾರ್ಥಿಗಳಿಂದ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮೈಸೂರು ಬಿಷಪ್ ಡಾ. ಥಾಮಸ್ ಆಂತೋಣಿ ವಾಳಪಿಳ್ಳೈ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಸಿ. ಆನಂದ್, ಪ್ರೊ. ಸುಜಾತ ದೇವಿ, ಪ್ರೊ. ರೀನಾ ಫ್ರ್ಯಾನ್ಸಿಸ್, ಡಾ. ಸುಖನ್ಯ, ಪ್ರೊ. ವಿವೇಕ ಮೇರಿ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.