ವೈಭವದ ಹೇಮಾದ್ರಾಂಬಾ ದೇವಿ ಮಹಾ ರಥೋತ್ಸವ
ಬನ್ನೂರು: ಹಸಿ ಭತ್ತ- ಬಿಸಿಬೆಲ್ಲದ ಕಣಜ, ವಹ್ನೀಪುರವೆಂದು ಪುರಾಣ ಪ್ರಸಿದ್ದವಾದ ಬನ್ನೂರು ಹೇಮಾದ್ರಾಂಬಾ ದೇವಿ ದಿವ್ಯ ಮಹಾ ರಥೋತ್ಸವವು ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ವಿವಿಧ ಬಣ್ಣದ ಪತಾಕೆಯೊಂದಿಗೆ ಹೂವಿನಿಂದ ಅಲಂಕರಿಸಿದ ಹೇಮಾದ್ರಾಂಬಾ ದೇವಿಯ ಚಿನ್ನದ ವಿಗ್ರಹವನ್ನು ಬೆಳಗ್ಗೆ ಪ್ರತಿಷ್ಠಾಪಿಸಿ, ಭಕ್ತರ ಸಮ್ಮುಖದಲ್ಲಿ ದೇವಾಲಯದ ಪ್ರಧಾನ ಅರ್ಚಕ ಎನ್.ಎಸ್. ಕೃಷ್ಣಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥವು ದೇವಾಲಯದಿಂದ ತೇರಿನ ಬೀದಿ ಮೂಲಕ ದೊಡ್ಡ ಅಂಗಡಿ ಬೀದಿಗಳಲ್ಲಿ ಹೇಮಾದ್ರಾಂಬಾ ದೇವಿ ಚೌಕ ಜೈಕಾರದೊಂದಿಗೆ ಸಂಚರಿಸಿತು. ಮಧ್ಯಾಹ್ನ ಸ್ವಸ್ಥಾನಕ್ಕೆ ರಥ ತಲುಪಿತು. ರಥೋತ್ಸವಕ್ಕೆ ವಿವಿಧ ಜಿಲ್ಲೆಗಳಿಂದ ಜಮಾಯಿಸಿದ ನವ ದಂಪತಿಗಳು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡು ರಥಕ್ಕೆ ಹಣ್ಣು- ದವನ ಎಸೆದು ದೇವಿಯ ದರ್ಶನ ಪಡೆದು ಪುನೀತರಾದರು. ರಥೋತ್ಸವದಲ್ಲಿ ಯುವಕರು ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು.
ಪಟ್ಟಣದ ವಿವಿಧ ಸಂಘ ಸಂಸ್ಥೆಗಳು ಭಕ್ತರಿಗೆ ಪ್ರಸಾದ, ಮಜ್ಜಿಗೆ-ಪಾನಕ, ಪ್ಯಾಕೆಟ್ನಲ್ಲಿ ನೀರು ವಿತರಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.