ಸಚಿವ ರಾಮದಾಸ್ಗೆ ಅಭಿನಂದನೆ
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎ. ರಾಮದಾಸ್ ಅವರನ್ನು ಇಲ್ಲಿನ ಶ್ರೀರಾಂಪುರದ ಚರ್ಚ್ನಲ್ಲಿ ಸನ್ಮಾನಿಸಲಾಯಿತು.
ಶಾಸಕರ ನಿಧಿಯಿಂದ ಈ ಚರ್ಚ್ನ ನವೀಕರಣಕ್ಕಾಗಿ 2 ಲಕ್ಷ ಅನುದಾನ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಫಾ. ಜೋಸೆಫ್ ಅವರು ಸಚಿವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫಾ. ಜೋಸೆಫ್, ಸಚಿವ ರಾಮದಾಸ್ ಅವರು ಕ್ರೈಸ್ತ ಸಮುದಾಯದ ಬಗ್ಗೆ ವಿಶೇಷ ಒಲವು ಹೊಂದಿದ್ದಾರೆ. ಅವರ ಪ್ರಯತ್ನದ ಫಲವಾಗಿ ಈ ಬಾರಿಯು ಇಲ್ಲಿನ ಸಂತ ಫಿಲೋಮಿನಾ ಚರ್ಚ್ನ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ ಮಾಡಿಸಿದ್ದಾರೆ ಎಂದರು.
ತಮ್ಮ ಶಾಸಕರ ನಿಧಿಯಿಂದ ಈ ಚರ್ಚ್ ನವೀಕರಣಕ್ಕೆ 5 ಲಕ್ಷ ಬಿಡುಗಡೆ ಮಾಡಿರುವ ಸಚಿವರ ಇಂತಹ ಪುಣ್ಯ ಕಾರ್ಯ ಇದೇ ರೀತಿ ಮುಂದುವರಿಯಲಿ ಎಂದು ಅವರು ಆಶಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.