ಆತ್ಮಹತ್ಯೆಗೆ ಯತ್ನಿಸಿದ್ದ ಪೇದೆಗೆ ಶಸ್ತ್ರಚಿಕಿತ್ಸೆ
ಮೈಸೂರು: ಇಬ್ಬರು ಕೈದಿಗಳು ಪರಾರಿಯಾಗಿದ್ದರಿಂದ ಮನನೊಂದು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸಿಎಆರ್ ಪೇದೆ ವಿ. ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅಪೋಲೋ ಆಸ್ಪತ್ರೆಯ ವೈದ್ಯರು ಪೇದೆ ಕೃಷ್ಣ ಅವರಿಗೆ ಸೋಮವಾರ ಮಧ್ಯರಾತ್ರಿವರೆಗೂ ಶಸ್ತ್ರಚಿಕಿತ್ಸೆ ನಡೆಸಿದ್ದು ಯಶಸ್ವಿಯಾಗಿದೆ. ಕೃಷ್ಣ ತಮ್ಮ ಕುಟುಂಬದ ಸದಸ್ಯರು ಹಾಗೂ ತಮ್ಮೊಂದಿಗೆ ಮಾತನಾಡಿರುವುದಾಗಿ ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್ ತಿಳಿಸಿದರು. ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪ್ಸರ್ ಖಾನ್ (35) ಮತ್ತು ರಫೀಕ್ (31) ಎಂಬವರು ತಪ್ಪಿಸಿಕೊಂಡವರು. ಕಳ್ಳತನ ಪ್ರಕರಣದ ವಿಚಾರಣೆಗಾಗಿ ಗುಂಡ್ಲುಪೇಟೆ ನ್ಯಾಯಾಲಯಕ್ಕೆ ಹಾಜರಾಗಿ ಸೋಮವಾರ ವಾಪಸ್ ಬರುವ ವೇಳೆ ನಂಜನಗೂಡಿನಲ್ಲಿ ಈ ಇಬ್ಬರು ಕೈದಿಗಳು ಪರಾರಿಯಾಗಿದ್ದರು. ಇದರಿಂದ ಮನನೊಂದ ಪೇದೆ ಕೃಷ್ಣ ಆತ್ಮಹತ್ಯೆಗೆ ಯತ್ನಿಸಿದ್ದರು.
ಶೋಧ ಮುಂದುವರಿಕೆ: ನಂಜನಗೂಡಿನಲ್ಲಿ ತಪ್ಪಿಸಿಕೊಂಡಿರುವ ಇಬ್ಬರು ಕೈದಿಗಳಿಗಾಗಿ ಶೋಧ ಮುಂದುವರಿಸಲಾಗಿದೆ. ಪ್ರಕರಣ ತನಿಖೆ ಚುರುಕುಗೊಳಿಸಲಾಗಿದೆ ಎಂದು ಎಸ್ಪಿ ಆರ್. ದಿಲೀಪ್ ತಿಳಿಸಿದ್ದಾರೆ.
27ಕ್ಕೆ ವಿವಿ ಶಿಕ್ಷಣ ಮಂಡಳಿ ಸಭೆ
ಮೈಸೂರು ವಿವಿ ಕ್ರಾಫರ್ಡ್‌ಭವನದ ಸಿಂಡಿಕೇಟ್ ಸಭಾಂಗಣದಲ್ಲಿ ಮಾ.27ರ ಬೆಳಗ್ಗೆ 11ಕ್ಕೆ ಶಿಕ್ಷಣ ಮಂಡಳಿಯ ನಾಲ್ಕನೇ ಸಾಮಾನ್ಯ ಸಭೆಯು ನಡೆಯಲಿದೆ ಎಂದು ವಿವಿ ಕುಲಸಚಿವರು ತಿಳಿಸಿದ್ದಾರೆ.
ಅಪರಿಚಿತ ಶವ ಪತ್ತೆ
ಬಾವಿಯೊಳಗೆ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೈಸೂರು ತಾಲೂಕಿನ ತುಕಡಿ ಮಾದಯ್ಯ ಹುಂಡಿಯಲ್ಲಿರುವ ಬಾವಿಯೊಳಗೆ ಅಪರಿಚಿತ ಶವ ಕಾಣಿಸಿಕೊಂಡಿದೆ. ಈ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಬಾವಿಯೊಳಗಿನ ನೀರು ಖಾಲಿ ಮಾಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.