ಆರು ಗಣ್ಯರಿಗೆ ಚೇತನ ಪ್ರಶಸ್ತಿ
ಕ.ಪ್ರ.ವಾರ್ತೆ ್ಣ ಹುಣಸೂರು ್ಣ ಮಾ.19
ಪಟ್ಟಣದ ಸ್ಪಂದನ ಸಾಂಸ್ಕೃತಿಕ ಪರಿಷತ್ ಹಾಗೂ ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ 2013ನೇ ಸಾಲಿನ ಸೇವಾ ಚೇತನ ಪ್ರಶಸ್ತಿಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಗಣ್ಯರನ್ನು ಆಯ್ಕೆ ಮಾಡಲಾಗಿದೆ. ಮಾ.24ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವುದಾಗಿ ಪರಿಷತ್ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ತಿಳಿಸಿದ್ದಾರೆ.
ಮಾಜಿ ಶಾಸಕ ಹಾಗೂ ಪ್ರಗತಿಪರ ರೈತ ಕೋಡಿಹಳ್ಳಿ ವಿ. ಪಾಪಣ್ಣ (ಸಾವಯವ ಕೃಷಿ), ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಚಂದ್ರಶೇಖರ್ (ಸಾಂಸ್ಕೃತಿಕ ಸಂಘಟನೆ), ವಕೀಲೆ ಮಂಜುಳಾ ಮಾನಸ (ಸಮಾಜಸೇವೆ), ಸಂಸ್ಕೃತ ಪ್ರಾಧ್ಯಾಪಕಿ ಕಮಲಾ ಜೈನ್ (ಸಾಹಿತ್ಯ ಕ್ಷೇತ್ರ), ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸೋಮಶೇಖರ್ (ರಂಗಭೂಮಿ) ಹಾಗೂ ತಾಲೂಕಿನ ಮಂಚಬಾಯನಹಳ್ಳಿ ಶಾಲೆ ಶಿಕ್ಷಕ ಎ. ಕುಮಾರ್ ಕಳ್ಳಿಕೊಪ್ಪಲು (ಶಿಕ್ಷಣ ಕ್ಷೇತ್ರ) ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ.24 ರಂದು ಪಟ್ಟಣದ ರೋಟರಿ ಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚುಟುಕು ಕವಿಮೇಳದಲ್ಲಿ ಈ ಆರು ಮಂದಿ ಸಾಧಕರಿಗೆ ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಂದು ನಡೆಯಲಿರುವ ರಾಜ್ಯಮಟ್ಟದ ಚುಟುಕು ಕವಿಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಪರಿಷತ್ ಕಾರ್ಯದರ್ಶಿ ಟಿ. ಲೋಕೇಶ್ ಮೊ. 9980750100 ಸಂಪರ್ಕಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.