ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎನ್‌ಕೆಎಫ್ ವಾರ್ಷಿಕೋತ್ಸವ

Parashurama
Updated On : 21 Mar 2013, 11:20 am

ಕ.ಪ್ರ.ವಾರ್ತೆ ್ಣ ಟಿ.ನರಸೀಪುರ ್ಣ ಮಾ.21
ಶಾಲಾ ಮಕ್ಕಳಲ್ಲಿನ ಪ್ರತಿಭಾನ್ವೇಷಣೆಗೆ ವಾರ್ಷಿಕೋತ್ಸವ ಸಮಾರಂಭ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತದೆ ಎಂದು ಎನ್‌ಕೆಎಫ್ ಫೌಂಡೇಷನ್ ಅಧ್ಯಕ್ಷ ಎನ್.ಕೆ. ಫರೀದ್ ಹೇಳಿದರು.
ಟಿಎಪಿಸಿಎಂಎಸ್‌ನ ರೈತ ಭವನದಲ್ಲಿ ನಡೆದ ಎನ್‌ಕೆಎಫ್ ಪಬ್ಲಿಕ್ ಶಾಲೆಯ ನಾಲ್ಕನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಪ್ರತಿಯೊಬ್ಬ ಮಗುವಿನಲ್ಲಿಯೂ ವಿಶಿಷ್ಟ ಪ್ರತಿಭೆ ಎನ್ನುವುದು ಇರುತ್ತದೆ. ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಪ್ರತಿಭೆ ಪತ್ತೆ ಹಚ್ಚಬೇಕು. ಪ್ರತಿಭೆ ಪ್ರೋತ್ಸಾಹಿಸಿ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಶಿಕ್ಷಕರು ಸಮರ್ಥವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಮುಸ್ಲಿಂ ಸಮುದಾಯದ ಮೌಲಾನ, ಪಪಂ ಮೂರನೇ ವಾರ್ಡ್ ನೂತನ ಸದಸ್ಯ ಟಿ.ಜಿ. ಪುಟ್ಟಸ್ವಾಮಿ ಅವರನ್ನು ಅಭಿನಂದಿಸಲಾಯಿತು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಎಚ್‌ಸಿಎಂ ಸೌಂಡ್ಸ್ ಮಾಲೀಕ ಬಿ. ಮನ್ಸೂರ್ ಆಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಕೆ.ಆರ್. ಷಣ್ಮುಖಸ್ವಾಮಿ, ಅಧ್ಯಕ್ಷ ಆರ್. ನಾಗೇಂದ್ರಕುಮಾರ್, ಕನ್ನಡಸೇನೆ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಪುಟ್ಟಸ್ವಾಮಿ, ಎನ್‌ಕೆಎಫ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಜೊಹಾರ ಸುಲ್ತಾನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments