ಗ್ರಾಮೀಣ ರಸ್ತೆ ಅಭಿವೃದ್ಧಿಗೆ 11 ಕೋಟಿ ಮಂಜೂರು
ಕ.ಪ್ರ.ವಾರ್ತೆ ್ಣ ಟಿ.ನರಸೀಪುರ ್ಣ ಮಾ.21
ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗಾಗಿ ವಿಶೇಷ ಘಟಕ ಯೋಜನೆಯಡಿ ವಿವಿಧ ಇಲಾಖೆಗಳ ಮೂಲಕ 11.30 ಕೋಟಿ ಮಂಜೂರು ಮಾಡಲಾಗಿದೆ ಎಂದು ಶಾಸಕ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು. ತಾಲೂಕಿನ ಮೂಗೂರು ಗ್ರಾಮದಲ್ಲಿ ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿಯಲ್ಲಿ ಚರಂಡಿ ಹಾಗೂ ಕಾಂಕ್ರಿಟ್ ರಸ್ತೆ ಹಾಗೂ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ವಿರೋಧ ಪಕ್ಷದಲ್ಲಿ ಇದ್ದುಕೊಂಡು ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಬಸವಣ್ಣ, ಎಸ್. ಮರಿಸ್ವಾಮಿ, ಎಂ.ಆರ್. ಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಚ್. ಮಂಜುನಾಥ್, ಶಂಕರ್, ಶಿವಮೂರ್ತಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.