ಪಪಂ ನೌಕರನ ವಿರುದ್ಧ ದೂರು
ಪಿರಿಯಾಪಟ್ಟಣ: ಹಣ ದುರುಪಯೋಗ ಆರೋಪದ ಮೇಲೆ ಪಟ್ಟಣ ಪಂಚಾಯಿತಿ ನೌಕರನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಪಟ್ಟಣ ಪಂಚಾಯಿತಿಯಲ್ಲಿ ಸಮುದಾಯ ಸಂಘಟಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಸಾರ್ವನಿಕರಿಗೆ ಶಹರಿ ರೋಜ್ಗಾರ್ ಯೋಜನೆಯ ಸಬ್ಸಿಡಿ ಸಾಲ ನೀಡುವ ಸಂಬಂಧ 3 ಲಕ್ಷಗಳಿಗೂ ಅಧಿಕ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ವಿವಿಧ ಸಂಘ ಸಂಸ್ಥೆಗಳಿಂದ ಲೋಕಾಯುಕ್ತರಿಗೆ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಪಂಕಜರೆಡ್ಡಿ ಅವರಿಗೆ ಲೋಕಾಯುಕ್ತ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸುವಂತೆ ನಿರ್ದೇಶಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.