ಬೃಂದಾವನ ಸ್ತ್ರೀಶಕ್ತಿ ಸಂಘ ವಾರ್ಷಿಕೋತ್ಸವ
ಕ.ಪ್ರ ವಾರ್ತೆ ್ಣ ಮೈಸೂರು ್ಣ ಮಾ.21
ಬೃಂದಾವನ ಸ್ತ್ರೀಶಕ್ತಿ ಸಂಘದ 4ನೇ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ಬಡಾವಣೆಯ ಸಮುದಾಯ ಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಮತ್ತು ಅವರ ಪತ್ನಿ ನಾಗಲಕ್ಷ್ಮಿ ಶಂಕರಲಿಂಗೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ಮುಖಂಡ ಮಲ್ಲಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಸಿ.ಎಲ್. ರೆಡ್ಡಿ ಫಾರ್ಮಸಿಟಿಕಲ್ಸ್ನ ವ್ಯವಸ್ಥಾಪಕ ನಿರ್ದೇಶಕಿ ಚಂದ್ರಕಲಾ ರೆಡ್ಡಿ ಅವರು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಪಾಲಿಕೆಯ ಸದಸ್ಯೆ ಅನಸೂಯಾ ರಾಮಣ್ಣ, ಜಿ.ಸಿ. ರೆಡ್ಡಿ, ವಿಜಯಾ ನಿರೂಪಿಸಿದರು. ಸದಸ್ಯೆ ರೇಣುಕಾ ಸ್ವಾಗತಿಸಿದರು. ಅಧ್ಯಕ್ಷೆ ಸತ್ಯಭಾಮಾ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.