ಮತದಾರರ ಪಟ್ಟಿ ಪರಿಷ್ಕರಣೆ: ಡಿಸಿ
ಕ.ಪ್ರ ವಾರ್ತೆ ್ಣ ಮೈಸೂರು ್ಣ ಮಾ.21
ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಮೇಗೌಡ ತಿಳಿಸಿದ್ದಾರೆ.
ಮೈಸೂರು ನಗರದ ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ಚಾಮಂಡೇಶ್ವರಿ, ಜಿಲ್ಲೆಯ ಪಿರಿಯಾಪಟ್ಟಣ, ಕೆ.ಆರ್. ನಗರ, ಹುಣಸೂರು, ಎಚ್.ಡಿ. ಕೋಟಿ, ನಂಜನಗೂಡು, ಟಿ. ನರಸೀಪುರ ಹಾಗೂ ವರುಣ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯನ್ನ ಕರಡು ಪ್ರತಿಯನ್ನು ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ ್ಛಜ್ಟ.್ಞಛ್ಠಟಿಛಡಿಛ್ಞಛ.ಟ್ಝ್ಛಿ.್ಝಟಿ ನಲ್ಲಿ ಪ್ರಕಟಿಸಲಾಗಿದೆ. ತಾಲೂಕಿನ ತಹಸೀಲ್ದಾರ್ ಕಚೇರಿ, ನಗರ ಪಾಲಿಕೆಯ ಚುನಾವಣಾ ಶಾಖೆಯಲ್ಲಿ ಮತದಾರರ ಪಟ್ಟಿ ಇರಿಸಲಾಗಿದ್ದು, ಸಾರ್ವಜನಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬಹುದು ಎಂದಿದ್ದಾರೆ. 18 ವರ್ಷ ತುಂಬಿದವರು ನಮೂನೆ 6 ರನ್ನು ಭರ್ತಿ ಮಾಡಿ, ಪಾಸ್ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ, ವಯಸ್ಸು ಹಾಗೂ ವಾಸಸ್ಥಳದ ದಾಖಲೆಗಳೊಂದಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ತಪ್ಪದೆ ಮತ ಚಲಾಯಿಸುವಂತೆಕೋರಿದ್ದಾರೆ.
ವಾಹನ ವಾಪಸ್ಸಿಗೆ ಸೂಚನೆ: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ಅಧ್ಯಕ್ಷರು ಉಪಾಧ್ಯಕ್ಷರು, ಅಧಿಕಾರೇತರ ಸದಸ್ಯರಿಗೆ ಒದಗಿಸಿರುವ ಸರ್ಕಾರಿ ವಾಹನಗಳನ್ನು ವಶಕ್ಕೆ ಒಪ್ಪಿಸುವಂತೆ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.