ಜಂಗಲ್ ಜಾಕಿ ರಾಜೇಶ್ ಆಸ್ಪತ್ರೆಗೆ ಮತ್ತೆ ದಾಖಲು
ಕ.ಪ್ರ.ವಾರ್ತೆ ಮೈಸೂರು ಮಾ.23
ಇನ್ನೂ ಬಿಡುಗಡೆಯಾಗದ ಜಂಗಲ್ ಜಾಕಿ ಚಿತ್ರದ ನಾಯಕ ರಾಜೇಶ್ ಅವರು ಮಾನಸಿಕ ಖಿನ್ನತೆಯಿಂದ ಮತ್ತೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಾಖಲಾಗಿದ್ದಾರೆ.
ರಿಯಾಲಿಟಿ ಶೋ ಮೂಲಕ ಪ್ರಸಿದ್ಧಿ ಪಡೆದು, ಸಿನಿಮಾ ರಂಗಕ್ಕೆ ಪ್ರವೇಶಿಸಿದ ರಾಜೇಶ್ ಕಳೆದ ವರ್ಷದ ಜುಲೈನಲ್ಲಿ ಮಾನಸಿಕ ಅಸ್ವಸ್ಥರಾಗಿ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಈಗ ಮತ್ತೆ ಮಾನಸಿಕ ಅಸ್ವಸ್ಥರಾಗಿದ್ದು, ಇದಕ್ಕೆ ಸರಿಯಾದ ಚಿಕಿತ್ಸೆ ಪಡೆಯದಿರುವುದೆ ಕಾರಣ ಎನ್ನಲಾಗಿದೆ.
ರಾಜೇಶ್ ಮನೆಯಲ್ಲಿ ಮತ್ತೆ ವಿಚಿತ್ರವಾಗಿ ವರ್ತಿಸುತ್ತಿದ್ದರಿಂದ ಗಾಬರಿಯಾದ ತಾಯಿ ಲಕ್ಷ್ಮಿ ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
2ನೇ ಬಾರಿ: ಈ ಹಿಂದೆಯೇ ರಾಜೇಶ್ ಮಾನಸಿಕ ಖಿನ್ನತೆಗೆ ಒಳಗಾಗಿ ಆಸ್ಪತ್ರೆಗೆ ಸೇರಿ, ಕೆಲ ದಿನ ಚಿಕಿತ್ಸೆ ಬಳಿಕ ಗುಣಮುಖ ಆಗಿದ್ದರು.
ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮತ್ತೆ ಚಿಕಿತ್ಸೆ ಪಡೆದಿರಲಿಲ್ಲ. ಹೀಗಾಗಿ, ಮತ್ತೆ ಆ ಸಮಸ್ಯೆ ಮರುಕಳಿಸಿದೆ.
ನಿರಂತರವಾಗಿ ಕೆಲವು ತಿಂಗಳು ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಈ ನಿಟ್ಟಿನಲ್ಲಿ ಮತ್ತೆ ವಿಚಿತ್ರವಾಗಿ ವರ್ತಿಸುತ್ತಿದ್ದ ಎಂದು ಕೆ.ಆರ್. ಆಸ್ಪತ್ರೆಯ ಮನೋ ವೈದ್ಯಕೀಯ ವಿಭಾಗದ ಡಾ.ಬಿ.ಎನ್. ರವೀಶ್ ಸುದ್ದಿಗಾರರಿಗೆ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.