ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ತೈಲ ಸಮಸ್ಯೆಗೆ ಜೈವಿಕ ಇಂಧನ ಪರ್ಯಾಯ: ಕಲಾಂ

Parashurama
Updated On : 24 Mar 2013, 12:24 pm

ಕ.ಪ್ರ.ವಾರ್ತೆ ಮೈಸೂರು ಮಾ.23
ಸಾರಿಗೆಗೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ತೈಲದ ಸಮಸ್ಯೆಗೆ ಜೈವಿಕ ಇಂಧನ ಪರ್ಯಾಯ ಮಾರ್ಗ ಎಂದು ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಹೇಳಿದರು.  ಜೆಎಸ್‌ಎಸ್ ಮಹಾವಿದ್ಯಾಪೀಠವು ಸುವರ್ಣ ಮಹೋತ್ಸವದ ಅಂಗವಾಗಿ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸರಣಿ ಉಪನ್ಯಾಸ ಮಾಲಿಕೆಯ ಐದನೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತವು ಇಂಧನ ಬಳಕೆಯ ಗ್ರಾಹಕರನ್ನು ಹೊಂದುವಲ್ಲಿ ಬಹು ವೇಗವಾಗಿ ಬೆಳೆಯುತ್ತಿದ್ದು, ಪ್ರತಿ ವರ್ಷ 2.20 ಸಾವಿರ ಕೋಟಿ ಮೌಲ್ಯದ ಇಂಧನವನ್ನು ಹೊರ ದೇಶಗಳಿಂದ ಅಮದು ಮಾಡಿಕೊಳ್ಳಲಾಗುತ್ತಿದೆ. ಬೇಡಿಕೆಗೆ ಅನುಗುಣವಾಗಿ ಶೇ. 25 ಇಂಧನ ಮಾತ್ರ ಇಲ್ಲಿ ಉತ್ಪತಿಯಾಗುತ್ತಿದೆ. ದಿನೇ ದಿನೇ ಇಂಧನ ಬಳಕೆ ಬೇಡಿಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಜೈವಿಕ ಇಂಧನ ಬಳಕೆಗೆ ಆದ್ಯತೆ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಭಾಂಗಣವನ್ನು ಡಾ. ಕಲಾಂ ಉದ್ಘಾಟಿಸಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಮುಖ್ಯ ಅತಿಥಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments