ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಇಂದು ಹೋಳಿ ಸಂಭ್ರಮಕ್ಕೆ ನಗರ ಸಜ್ಜು

Parashurama
Updated On : 25 Mar 2013, 10:10 am

ಕ.ಪ್ರ.ವಾರ್ತೆ ಮೈಸೂರು ಮಾ.25
ಹೋಳಿ ಹಬ್ಬ ಆಚರಣೆ ಮಂಗಳವಾರ (ಮಾ.26) ಮೈಸೂರಿನಾದ್ಯಂತ ನಡೆಯಲಿದೆ.
ಈ ವೇಳೆ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕಾಪಾಡುವ ದೃಷ್ಟಿಯಿಂದ ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್ ಅವರು ಸಾರ್ವಜನಿಕರಿಗೆ ಈ ಕೆಳಕಂಡ ಸೂಚನೆ ಪಾಲಿಸುವಂತೆ ತಿಳಿಸಿದ್ದಾರೆ.
ಹೋಳಿ ಹಬ್ಬದ ಆಚರಣೆ ವೇಳೆ ಯಾವುದೇ ವ್ಯಕ್ತಿಯಿಂದ ಬಲವಂತವಾಗಿ ಯಾವುದೇ ರೀತಿಯ ಚಂದಾ ವಸೂಲಿ ಮಾಡುವುದನ್ನು ನಿಷೇಧಿಸಲಾಗಿದೆ. ಬಲವಂತವಾಗಿ ಚಂದಾ ವಸೂಲಿ ಮಾಡುವುದು ಸುಲಿಗೆ ಮಾಡಿದಂತೆ. ಇದು ಶಿಕ್ಷಾರ್ಹ ಅಪರಾಧ. ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಹಾಗೂ ಯಾವುದೇ ವ್ಯಕ್ತಿಗಳಿಗೆ ಬಣ್ಣವನ್ನು ಬಲವಂತವಾಗಿ ಹಾಕಬಾರದು ಮತ್ತು ಎರಚಬಾರದು. ಹೆಣ್ಣು ಮಕ್ಕಳನ್ನು ಚುಡಾಯಿಸಬಾರದು ಎಂದು ಎಚ್ಚರಿಸಿದ್ದಾರೆ.
ಬಣ್ಣ ಎರಚುವ ನೆಪದಲ್ಲಿ ಯಾವುದೇ ವ್ಯಕ್ತಿ ಮಹಿಳಾ ಕಾಲೇಜು, ವಿದ್ಯಾರ್ಥಿನಿಲಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಆಡಚಣೆಯಾಗದಂತೆ ಸ್ಥಳವನ್ನು ಕಾಮ ದಹನಕ್ಕಾಗಿ ಆಯ್ಕೆ ಮಾಡಬೇಕು. ಯಾವುದೇ ಕಾರಣಕ್ಕೂ ರಸ್ತೆಯ ಮಧ್ಯದಲ್ಲಿ ಕಾಮ ದಹನ ಮಾಡಬಾರದು. ಕಾಮದಹನದ ಸಂಬಂಧ ಯಾವುದೇ ಬೆಂಕಿ ಹೊತ್ತಿಸುವ ವಸ್ತುಗಳಾದ ಕಟ್ಟಿಗೆ, ಸೌದೆ, ಬೆರಣಿ ಹಾಗೂ ಇತರೇ ಉರುವಲು ವಸ್ತುಗಳನ್ನು ಸಾರ್ವಜನಿಕರಿಂದ ಬಲವಂತವಾಗಿ ವಸೂಲು ಮಾಡಬಾರದು. ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಕಾಮದಹನ ಮಾಡುವ ಸ್ಥಳ ಮೊದಲೇ ತೋರಿಸಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.
ಧ್ವನಿವರ್ಧಕ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಡಿಮೆ ಧ್ವನಿಯಲ್ಲಿ ಉಪಯೋಗಿಸಬೇಕು. ಆಶ್ಲೀಲ ಸಾಹಿತ್ಯವುಳ್ಳ ಗೀತೆ ಪ್ರಸಾರ ಮಾಡಬಾರದು. ಮನರಂಜನಾ ಕಾರ್ಯಕ್ರಮಗಳನ್ನು ರಾತ್ರಿ 10 ಒಳಗೆ ಮುಗಿಸುವುದು. ಹಾಲಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ನೀಡಬಾರದು ಎಂದು ಅವರು ಹೇಳಿದ್ದಾರೆ.
ಹೋಳಿ ಆಚರಣೆ ಮತ್ತು ಮೆರವಣಿಗೆ ಬಗ್ಗೆ ಮುಂಚಿತವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಮೆರವಣಿಗೆ ವೇಳೆ ಯಾವುದೇ ಧಾರ್ಮಿಕ ನೋವುಂಟು ಮಾಡುವ ಘೋಷಣೆ ಕೂಗಬಾರದು ಹಾಗೂ ವಾದ್ಯ ನುಡಿಸಬಾರದು.ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಪೂರ್ವನುಮತಿ ಪಡೆಯಬೇಕು.
ಈ ನಿಬಂಧನೆ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಹೋಳಿ ಹಬ್ಬವನ್ನು ನಗರದಲ್ಲಿ ಶಾಂತ ರೀತಿಯಲ್ಲಿ ಆಚರಿಸಲು, ಸೌಹಾರ್ದತೆ ಕಾಪಾಡಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕು. ಈ ನಿಬಂಧನೆ ಉಲ್ಲಂಘಿಸಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣಿಗಳಿಗೆ ಅಥವಾ ಕಂಟ್ರೋಲ್ ರೂಂ ದೂ. 100, 2418139, 2418339 ಮಾಹಿತಿ ನೀಡಲು ಆಯುಕ್ತರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments