ಕೆಜೆಪಿಗೆ ರಾಜಿನಾಮೆ
ಮೈಸೂರು: ಕರ್ನಾಟಕ ಜನತಾ ಪಕ್ಷವು ಒಕ್ಕಲಿಗರ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಮುಖಂಡ ಎಸ್. ಜಯಪ್ರಕಾಶ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಕೆಜೆಪಿ ಉದಯವಾದಾಗಿನಿಂದ ಪಕ್ಷದ ಸಂಘಟನೆಗಾಗಿ ಶ್ರಮಿಸಿದ್ದೇನೆ. ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಪ್ರಾರಂಭದಿಂದಲೂ ನನ್ನನ್ನೇ ಅಭ್ಯರ್ಥಿ ಎಂದು ಪ್ರತಿಬಿಂಬಿಸಲಾಗಿತ್ತು. ಅಲ್ಲದೆ, ಕೋರ್ ಕಮಿಟಿಯ ಸದಸ್ಯೆನಾಗಿಯೂ ನೇಮಕ ಮಾಡಲಾಗಿತ್ತು. ಆದರೆ, ಚಾಮರಾಜ ವಿಧಾನ ಕ್ಷೇತ್ರದ ಏಕೈಕ ಟಿಕೆಟ್ ಆಕ್ಷಾಂಕಿಯಾಗಿದ್ದ ನನ್ನ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸದಿರುವುದು ಆಶ್ಚರ್ಯ ಎಂದಿದ್ದಾರೆ. ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದು, ಹಿತೈಷಿಗಳ ಬೆಂಬಲಿಗರ ಹಾಗೂ ಅಭಿಮಾನಿಗಳ ಸಭೆ ನಡೆಸಿ ಮುಂದಿನ ರಾಜಕೀಯ ಭವಿಷ್ಯ ನಿರ್ಧರಿಸುವುದಾಗಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.