ಹೋಳಿ ಸಂಭ್ರಮಕ್ಕೆ ನಗರ ಸಜ್ಜು
ಮೈಸೂರು: ಹೋಳಿ ಹಬ್ಬ ಆಚರಣೆ ಮಂಗಳವಾರ (ಮಾ.26) ಮೈಸೂರಿನಾದ್ಯಂತ ನಡೆಯಲಿದೆ. ಈ ವೇಳೆ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಕಾಪಾಡುವ ದೃಷ್ಟಿಯಿಂದ ನಗರ ಪೊಲೀಸ್ ಆಯುಕ್ತ ಕೆ.ಎಲ್. ಸುಧೀರ್ಸಾರ್ವಜನಿಕರಿಗೆ ಸೂಚನೆ ಪಾಲಿಸುವಂತೆ ತಿಳಿಸಿದ್ದಾರೆ. ಹೋಳಿ ಹಬ್ಬದ ಆಚರಣೆ ವೇಳೆ ಯಾವುದೇ ವ್ಯಕ್ತಿಯಿಂದ ಬಲವಂತವಾಗಿ ಚಂದಾ ವಸೂಲಿ ಮಾಡುವುದನ್ನು ನಿಷೇಧಿಸಲಾಗಿದೆ. ಬಲವಂತವಾಗಿ ಚಂದಾ ವಸೂಲಿ ಮಾಡುವುದು ಸುಲಿಗೆ ಮಾಡಿದಂತೆ. ಇದು ಶಿಕ್ಷಾರ್ಹ ಅಪರಾಧ. ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಹಾಗೂ ಯಾವುದೇ ವ್ಯಕ್ತಿಗಳಿಗೆ ಬಣ್ಣವನ್ನು ಬಲವಂತವಾಗಿ ಹಾಕಬಾರದು, ಎರಚಬಾರದು. ಹೆಣ್ಣು ಮಕ್ಕಳನ್ನು ಚುಡಾಯಿಸಬಾರದು ಎಂದು ಎಚ್ಚರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.