ಟಿಪ್ಪರ್ ಮಾಲೀಕರ 3ನೇ ದಿನ ಮುಷ್ಕರ
ಮೈಸೂರು: ಹೊಸ ಮರಳು ನೀತಿ ವಿರೋಧಿಸಿ ಹಾಗೂ ತಮ್ಮ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಮೈಸೂರು ಜಿಲ್ಲಾ ಟಿಪ್ಪರ್ ಮಾಲೀಕರ ಸಂಘದವರು ನಡೆಸುತ್ತಿರುವ ಮುಷ್ಕರವು 3ನೇ ದಿನವಾದ ಮಂಗಳವಾರ ಸಹ ಮುಂದುವರಿಯಿತು. ಟಿಪ್ಪರ್ಗಳಲ್ಲಿ ಮರಳು ಸಾಗಾಣಿಕೆ ಅವಕಾಶ ಕಲ್ಪಿಸಿಕೊಡಬೇಕು. ಭಾನುವಾರ ಹೊರತುಪಡಿಸಿ ಪ್ರತಿದಿನ ಒಂದು ಟಿಪ್ಪರ್ಗೆ 2 ಪರ್ಮಿಟ್ ನೀಡಬೇಕು. ಟಿಪ್ಪರ್ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸುವುದನ್ನು ನಿಲ್ಲಿಸಲು ಒತ್ತಾಯಿಸಿ ಅವರು ಈ ಮುಷ್ಕರ ಹಮ್ಮಿಕೊಂಡಿದ್ದಾರೆ. ಮಾ. 27ರ ಬೆಳಗ್ಗೆ 11ಕ್ಕೆ ನ್ಯಾಯಾಲಯದ ಎದುರಿನಿಂದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿವರೆಗೆ ಟಿಪ್ಪರ್ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಪಿ. ಪ್ರಸನ್ನಕುಮಾರ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.