ಮಾತಿಗೆ ತಪ್ಪಿದ ಮಹೇಶ್ರಿಂದ ಸಲ್ಲದ ಆರೋಪ
ಕ.ಪ್ರ.ವಾರ್ತೆ ಮೈಸೂರು ಮಾ.26
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇದೊಂದು ಬಾರಿ ಸ್ಪರ್ಧಿಸುತ್ತೇನೆ, ಮುಂದೆ ನಿಮಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಪ್ರಮಾಣ ಮಾಡಿದ್ದ ಶಾಸಕ ಸಾ.ರಾ. ಮಹೇಶ್ ಈ ಬಾರಿ ಮತ್ತೆ ಸ್ಪರ್ಧಿಸುತ್ತಿದ್ದು, ಕೊಟ್ಟ ಮಾತಿಗೆ ತಪ್ಪಿರುವ ಅಳುಕು ಮತ್ತು ಆತಂಕದಿಂದ ನನ್ನ ಮೇಲೆ ಸಲ್ಲದ ಆರೋಪ ಮಾಡಿ ಮತದಾರರ ಅನುಕಂಪ ಗಿಟ್ಟಿಸಲು ಕಣ್ಣೀರಿಟ್ಟಿದ್ದಾರೆ ಎಂದು ಕೆಜೆಪಿ ಅಭ್ಯರ್ಥಿ ಕೆ.ಎನ್. ಬಸಂತ್ ಆರೋಪಿಸಿರು. ಸಂಸದ ಎಚ್. ವಿಶ್ವನಾಥ್ ಅವರ ಕುತಂತ್ರಕ್ಕೆ ನಾನು ಬಲಿಯಾಗಿದ್ದೇನೆ ಎಂಬ ಸಾ.ರಾ. ಮಹೇಶ್ ಹೇಳಿಕೆಗೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ಮಾತಿನಂತೆ ನಡೆದುಕೊಂಡು ಈ ಬಾರಿ ನಮಗೆ ಅವಕಾಶ ಕೊಡಿ ಎಂದು ಕೇಳಿದ ನಮ್ಮ ಬಗ್ಗೆ ಇವರು ಕೇಳಿದಾಗಲೆಲ್ಲಾ ಬಿ ಫಾರಂ ಇವರ ಅಪ್ಪನ ಆಸ್ತಿಯೇ ನಂಜಪ್ಪನವರ ಕುಟುಂಬದವರಿಗೆ ಯಾರು ಮತ ಹಾಕುತ್ತಾರೆ ಎಂದು ನಮ್ಮ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು. ಜಿಲ್ಲಾ ಕಾರ್ಯದರ್ಶಿ ಎಲ್.ಪಿ. ಗೊಪಾಲ್, ತಾಲೂಕು ಅಧ್ಯಕ್ಷ ಸಿ.ವಿ. ಗುಡಿ ಜಗದೀಶ್, ಪ್ರಕಾಶ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.