ಮೈಸೂರು

ಇಂದು ದೇವೇಗೌಡ ಪ್ರಚಾರ, ಭಾಷಣ (ಸುದ್ದಿ ಸಂಕ್ಷೇಪ)

ಕೆ.ಆರ್. ನಗರ: ತಾಲೂಕಿನ ಮಿರ್ಲೆ ಮತ್ತು ಹೊಸೂರು ಗ್ರಾಮಗಳಿಗೆ ಮಾ.30 ರಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ಭೇಟಿ ನೀಡಿ, ಪಕ್ಷದ ಅಭ್ಯರ್ಥಿ ಸಾ.ರಾ. ಮಹೇಶ್ ಪರ ಬಹಿರಂಗ ಸಭೆ ನಡೆಸಿ, ಚುನಾವಣಾ ಪ್ರಚಾರ ಭಾಷಣ ಮಾಡುವರು. ಮಧ್ಯಾಹ್ನ 3ಕ್ಕೆ ಮಿರ್ಲೆ, ಸಂಜೆ 5ಕ್ಕೆ ಹೊಸೂರು ಗ್ರಾಮಗಳಲ್ಲಿ ಅವರು ಬಹಿರಂಗ ಸಭೆಯಲ್ಲಿ ಮಾತನಾಡುವರು. ಸಂಸದ ಎನ್.ಚಲುವರಾಯಸ್ವಾಮಿ, ಶಾಸಕರಾದ ಸಾ.ರಾ. ಮಹೇಶ್, ಸಂದೇಶ್ ನಾಗರಾಜು, ಪಕ್ಷದ ಜಿಲ್ಲಾಧ್ಯಕ್ಷ ಎಸ್. ಚಿಕ್ಕಮಾದು, ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್ ಭಾಗವಹಿಸುವರು. ಈ ಎರಡು ಸಭೆಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್ ಕೋರಿದ್ದಾರೆ.
ರಾಜಕೀಯ ಕುಮ್ಮಕ್ಕು, ಅಡ್ಡಿ: ಆರೋಪ
ಸುತ್ತೂರು: ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿಯ ಮರಡಿಹುಂಡಿ ಹಾಗೂ ತುಮ್ಮನೇರಳೆ ಗ್ರಾಮಗಳಿಗೆ ಸೇರಿರುವ ಶ್ರೀದಾಳಕಾರತೋದೆಶ್ವರಸ್ವಾಮಿ ಮತ್ತು ಅಮ್ಮನವರ ದೇವಸ್ಥಾನದ ಕಾರ್ಯಕ್ರಮಕ್ಕೆ ರಾಜಕೀಯ ಕುಮ್ಮಕ್ಕಿನಿಂದ ಅಡ್ಡಿ ಮಾಡಲಾಗುತ್ತಿದೆ ಎಂದು ಮುಖಂಡರು ಆರೋಪಿಸಿದ್ದಾರೆ. ಶಿಥಿಲಗೊಂಡಿದ್ದ ಈ ದೇವಸ್ಥಾನವನ್ನು ದಾನಿಗಳ ನೆರವಿನಿಂದ ಜೀರ್ಣೋದ್ಧಾರ ಮಾಡಿಸಲಾಗಿದ್ದು, ಮಾ.28 ಮತ್ತು 29 ರಂದು ದೇವಸ್ಥಾನದಲ್ಲಿ ಗಣಪತಿ ಪೂಜೆ, ಗಂಗೆ ಪೂಜೆ ಮತ್ತಿತರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವಂತೆ ನಾಗೇಂದ್ರ ಮತ್ತಿತರರು ತಿಳಿಸಿದ್ದರು. ಆದರೆ ಯಾವ ರಾಜಕೀಯ ವ್ಯಕ್ತಿಗಳನ್ನು ಆಹಾನಿಸಲು ಭಕ್ತಾದಿಗಳು ಒಪ್ಪಲಿಲ್ಲ. ಈ  ಹಿನ್ನೆಲೆಯಲ್ಲಿ ಅವರ ಗುಂಪಿನವರಾದ ನಾಗೇಂದ್ರ ಮತ್ತು ಬುಲೆಟ್ ಮಹದೇವ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಮರಡಿಹುಂಡಿಯ ಎಂ.ಡಿ. ಶಿವಣ್ಣ ಹಾಗೂ ತುಮ್ಮನೇರಳೆ ಟಿ.ಎನ್. ಮಹೇಶ್ ಆರೋಪಿಸಿದ್ದಾರೆ.
ವರುಣ ಯುವ ಜೆಡಿಎಸ್‌ಗೆ ನೇಮಕ
ಸುತ್ತೂರು: ವರುಣಾ ವಿಧಾನಸಭಾ ಕ್ಷೇತ್ರದ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷರಾಗಿ ನಂಜನಗೂಡು ತಾಲೂಕಿನ ಚಿನ್ನಂಬಳ್ಳಿ ಗ್ರಾಮದ ಶೇಷಾದ್ರಿ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್