ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.29
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶುಕ್ರವಾರ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ.ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡಿದರೆ ಹೊರತು ಪಕ್ಷಕ್ಕೆ ಮತ ಕೇಳಲಿಲ್ಲ. ಬಳಿಕ ಅವರು ಮೈಸೂರಿಗೆ ಆಗಮಿಸಿ ಸರ್ಕಾರಿ ಅತಿಥಿ ಗೃಹದಲ್ಲಿ ಕೆಲಕಾಲ ವಿಶ್ರಾಂತಿ ಪಡೆದರು. ಸಂಜೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.ಶನಿವಾರ ಬೆಳಗ್ಗೆ ಎಚ್.ಡಿ. ಕೋಟೆಯಲ್ಲಿ ಆಯೋಜಿಸಿರುವ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಲು ತೆರಳುವರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಧ್ಯಾಹ್ನ ಅವರು ಕೆ.ಆರ್. ನಗರ ತಾಲೂಕಿನಲ್ಲಿ ಪ್ರವಾಸ ಮಾಡುವರು.