ಮೈಸೂರು

ಎಸ್ಸೆಸ್ಸೆಲ್ಸಿ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮೈಸೂರು: ನಗರ ಹಾಗೂ ಜಿಲ್ಲೆಯಾದ್ಯಂತ ಏ.1 ರಿಂದ 10ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂಗವಾಗಿ ಬೆಳಗ್ಗೆ 6 ರಿಂದ ಸಂಜೆ 5ರವರೆಗೆ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಸಿ. ಶಿಖಾ ಆದೇಶಿಸಿದ್ದಾರೆ. ಈ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಬಳಿ ಇರುವ ಎಲ್ಲ ಝೆರಾಕ್ಸ್ ಹಾಗೂ ಲೇಖನ ಸಾಮಗ್ರಿ ಅಂಗಡಿಗಳನ್ನು ಪರೀಕ್ಷೆ ಪ್ರಾರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿ ಮುಗಿಯುವವರೆಗೆ ಮುಚ್ಚುವಂತೆಯೂ ಹಾಗೂ ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸುವುದನ್ನು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸುವುದನ್ನು ಮತ್ತು ಧ್ವನಿವರ್ಧಕಗಳ ಬಳಕೆ ಸಹ ನಿಷೇಧಿಸಿದೆ.
ಮೇ 16 ರಿಂದ  ವಿವಿ ಪದವಿ ಪರೀಕ್ಷೆಗಳು
ಮೈಸೂರು ವಿವಿ ವಾರ್ಷಿಕ ಪರೀಕ್ಷೆಗಳು ಹಾಗೂ ಒಂದರಿಂದ 6ನೇ ಸೆಮಿಸ್ಟರ್ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎಂ, ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ (ಎಫ್‌ಸಿಎಸ್ಸಿ), ಬಿಟಿಎಚ್, ಬಿ.ಎಸ್ಸಿ (ವಾಕ್ ಮತ್ತು ಶ್ರವಣ) ಬಿ.ಎಸ್.ಎಡ್ (ಎಚ್ ಅಂಡ್ ಐ) ಬಿ.ಎಚ್.ಎಂ, (ಐಎಸ್‌ಎಸ್ ಸ್ಕೀಂ), ಬಿಪಿಎ, ಬಿಎಫ್‌ಎ, ಬಿಸಿಎಸ್ ಮತ್ತು ಬಿಸಿಎ ಪದವಿಗಳ ಪರೀಕ್ಷೆಗಳು ಮೇ 16 ರಿಂದ ಪ್ರಾರಂಭವಾಗುತ್ತವೆ. ಪ್ರಾಯೋಗಿಕ ಪರೀಕ್ಷೆಗಳು ಲಿಖಿತ ಪರೀಕ್ಷೆಗಳು ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ನಡೆಯುತ್ತವೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಮತ್ತು ಪರೀಕ್ಷಾ ಶುಲ್ಕವನ್ನು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಏ. 17 ರೊಳಗೆ ಸಲ್ಲಿಸಬೇಕು.
ನಾಳೆ ಮೈಸೂರು -ಶಿವಮೊಗ್ಗ ರೈಲು ರದ್ದು
ಮೈಸೂರು - ಶಿವಮೊಗ್ಗ ಟೌನ್ ಪ್ಯಾಸೆಂಜರ್ ರೈಲು ಸಂಚಾರವನ್ನು ಮಾ.31 ರಂದು ರದ್ದುಗೊಳಿಸಲಾಗಿದೆ. ಬೀರೂರು ಮತ್ತು ಶಿವಮೊಗ್ಗ ಪಟ್ಟಣಗಳ ನಡುವೆ ಬ್ರಾಡ್‌ಗೇಜ್ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಬೆಳಗ್ಗೆ 10.05 ಕ್ಕೆ ತೆರಳಬೇಕಿದ್ದ ಮೈಸೂರು- ಶಿವಮೊಗ್ಗ ಟೌನ್ ಪ್ಯಾಸೆಂಜರ್ (ನಂ.56270) ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೇಲ್ವೆ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ.ಅನೂಪ್ ದಯಾನಂದ ಸಾಧು ತಿಳಿಸಿದ್ದಾರೆ. ಅದೇ ದಿನ ಬೆಳಗ್ಗೆ 10.30ಕ್ಕೆ ಹೊರಡಲಿರುವ ಶಿವಮೊಗ್ಗ ಟೌನ್ - ಮೈಸೂರು ಪ್ಯಾಸೆಂಜರ್ (56269) ರೈಲಿನ ಸಂಚಾರ ರದ್ದಾಗಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್