ಮೈಸೂರು

ಬಿಎಸ್‌ವೈ ನಾಯಕತ್ವ ಅನಿವಾರ್ಯ

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ ಮಾ.29
ರಾಜ್ಯದ ನೆಲ ಜಲ, ಭಾಷೆಯ ಸಂರಕ್ಷಣೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ರಾಜ್ಯಕ್ಕೆ ಅನಿವಾರ್ಯ ಎಂದು ಕೆಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ಹೇಳಿದರು.
ಕೆಜೆಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿ  ಮಾತನಾಡಿದ ಅವರು, ಬಿಎಸ್‌ವೈ ಅವರ ಮಹಿಳಾ ಪರ ಚಿಂತನೆಗಳಿಂದಾಗಿ ರಾಜ್ಯದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ಹಾಗೂ ಉತ್ತಮ ಅವಕಾಶಗಳು ಸಿಗುವಂತಾಗಿದೆ.
ಭಾಗ್ಯಲಕ್ಷಿ ಯೋಜನೆ, ವಿಧವಾ ವೇತನ ಸೇರಿದಂತೆ ಮಹಿಳೆರಿಗಾಗಿ ಬಿಎಸ್‌ವೈ ಅವರು ಜಾರಿಗೆ ತಂದ ಮಹಿಳಾ ಪರ ಯೋಜನೆಗಳನ್ನು ಮಹಿಳೆಯರು ಎಂದಿಗೂ ಮರೆಯಬಾರದು. ರಾಜ್ಯದಲ್ಲಿ ಶಾಂತಿ ನೆಮ್ಮದಿ ನೆಲೆಸಬೇಕಾದಲ್ಲಿ ಬಿಎಸ್‌ವೈ ಮುಖ್ಯಮಂತ್ರಿ ಆಗಲೇಬೇಕು. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಶ್ರಮಿಸುವಂತೆ ಮನವಿ ಮಾಡಿದರು.
ಪಕ್ಷದಿಂದ ಸ್ಪರ್ಧಿಸಲು 50 ಮಹಿಳಾ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದು, ಮೊದಲ ಪಟ್ಟಿಯಲ್ಲಿ ಮೂರು ಸ್ಥಾನಗಳಿಗೆ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ರಾಜ್ಯ ಮಹಿಳಾ ಘಟಕ ಪಕ್ಷದಿಂದ ಕನಿಷ್ಠ 30 ಮಹಿಳೆಯರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಒತ್ತಾಯಿಸಲಾಗಿದೆ ಎಂದು ಹೇಳಿದರು.
ಪಕ್ಷದ ತಾಲೂಕು ಮುಖಂಡ ಹಾಗೂ ಪಕ್ಷದ ಅಭ್ಯರ್ಥಿ ಎಚ್.ಸಿ. ಬಸವರಾಜು, ಕೆಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಧಾ ಜಯಕುಮಾರ್, ಜಿಪಂ ಮಾಜಿ ಸದಸ್ಯೆ ಶಶಿಕಲಾ ನಾಗರಾಜ್, ಕೆಜೆಪಿ ಪಕ್ಷದ ತಾ. ಅಧ್ಯಕ್ಷ ಲಕ್ಷ್ಮಿನಾರಾಯಣ್ ಮಾತನಾಡಿದರು. ಮುಖಂಡರಾದ ತಾಪಂ ಮಾಜಿ ಅಧ್ಯಕ್ಷೆ ಭಾಗ್ಯಮ್ಮ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ, ಸಿ.ಸಿ. ಸದಾಶಿವಪ್ಪ, ವಿರೂಪಾಕ್ಷಪ್ಪ, ನಂಜುಂಡಸ್ವಾಮಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್