ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಗೇಟ್ ಪರೀಕ್ಷೆಯಲ್ಲಿ 52ನೇ ರ್ಯಾಂಕ್

Parashurama
Updated On : 30 Mar 2013, 10:05 am

ಮೈಸೂರು: ನಗರದ ಮೊಹಮ್ಮದ್ ರಾಯನ್ ಷರೀಫ್ ಗೇಟ್ ಪರೀಕ್ಷೆ ಅಖಿಲ ಭಾರತ ಮಟ್ಟದಲ್ಲಿ 52ನೇ ರ್ಯಾಂಕ್ ಗಳಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 2,56,135 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಅಂಗವಿಕಲರ ಬಸ್ ನವೀಕರಣ
ಸಾರಿಗೆ ಸಂಸ್ಥೆಯಿಂದ ಅಂಗವಿಕಲರಿಗೆ ನೀಡಿರುವ 2012ರ ಸಾಲಿನ ಬಸ್ ಪಾಸುಗಳ ನವೀಕರಿಸುವ ಪ್ರಕ್ರಿಯೆಯು ಏ. 1ರಿಂದ 30 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಫಲಾನುಭವಿಗಳು 550  ಪಾವತಿಸಿ ಹಳೇ ಪಾಸ್‌ನ ಜೆರಾಕ್ಸ್ ಪ್ರತಿ ಹಾಗೂ 2 ಭಾವಚಿತ್ರಗಳನ್ನು ಸಲ್ಲಿಸಿ ರಿಯಾಯಿತಿ ದರದ ಬಸ್ ಪಾಸುಗಳನ್ನು ಪಡೆದುಕೊಳ್ಳುವಂತೆ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ  ಎಂ.ಎನ್. ಶ್ರೀನಿವಾಸ್ ತಿಳಿಸಿದ್ದಾರೆ.
ಹೋಬಳಿ ಜೆಡಿಎಸ್ ಅಧ್ಯಕ್ಷರ ಬದಲು
ಮೈಸೂರು: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಹೋಬಳಿ ಘಟಕದ ಅಧ್ಯಕ್ಷ ಯಾಂದಳ್ಳಿ ಸಿದ್ದೇಗೌಡರನ್ನು ಪದಚ್ಯುತಗೊಳಿಸಿ, ಅವರ ಸ್ಥಾನಕ್ಕೆ ಕುಪ್ಪೇಗಾಲ ಬಾಬು ಅವರನ್ನು ನೇಮಿಸಲಾಗಿದೆ. ಶನಿವಾರ ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ನಡೆದ ವರುಣ ಹೋಬಳಿಯ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಚೆಲುವರಾಜು ಅವರ ಗೆಲವಿಗೆ ಶ್ರಮಿಸಲು ಈ ಬದಲಾವಣೆ ಅಗತ್ಯವಿತ್ತು. ನೂತನ ಅಧ್ಯಕ್ಷರು ಪಕ್ಷ ಸಂಘಟನೆಗೆ ಸಕ್ರಿಯರಾಗಿ ದುಡಿಯುವಂತೆ ವರುಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಿ.ಎನ್. ಚಂದ್ರು ತಿಳಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ವರುಣ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಗುರಿಕಾರ್ ಬಸವಣ್ಣ, ಎಸ್ಸಿ ಘಟಕದ ಅಧ್ಯಕ್ಷ ಹಲಗಯ್ಯನಹುಂಡಿ ಶಂಕರ್, ಬಿಳಿಗೆರೆ ಹೋಬಳಿ ಅಧ್ಯಕ್ಷ ರಾಜಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments