ಮೈಸೂರು

ಜಾಗತೀಕರಣ ಎದುರಿಸಲು ಕೌಶಲ ಅವಶ್ಯ

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.30
ಜಾಗತೀಕರಣದ ಸವಾಲು ಎದುರಿಸಬೇಕಾದರೆ ಕೌಶಲಾಭಿವೃದ್ಧಿ ಅವಶ್ಯಕ ಎಂದು ನಿಟ್ಟೆ ಗ್ಲೋಬಲ್ ಇನಿಷಿಯೇಟಿವ್ಸ್ ವಿವಿಯ ನಿರ್ದೇಶಕ ಡಾ.ಎಂ.ಎಸ್. ಮೂಡಿತ್ತಾಯ ಹೇಳಿದರು.
ಎಸ್‌ಬಿಆರ್‌ಆರ್ ಮಹಾಜನ ಕಾಲೇಜು ಹಾಗೂ ಮೈಸೂರು ವಿವಿಯ ಖಾಸಗಿ ಕಾಲೇಜುಗಳ ಪ್ರಾಂಶುಪಾಲರ ವೇದಿಕೆ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಗುರುಕುಲದಿಂದ ಜಾಗತಿಕರಣದವರೆಗೆ ಎಂಬ ವಿಷಯ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಪ್ರಾಚೀನ ಕಾಲದಲ್ಲಿ ಗುರುಕುಲ ಪದ್ಧತಿಯಿತ್ತು. ಆಗ ವಿದ್ಯಾರ್ಥಿಗಳು ಹಾಗೂ ಗುರುಗಳ ನಡುವಿನ ಸಂಬಂಧ ಉತ್ತಮವಾಗಿತ್ತು. ಆದರೆ, ಇಂದು ಕಾಲ ಬದಲಾದಂತೆ ಜಾಗತೀಕರಣ ಹಾಗೂ ಉದಾರೀಕರಣದ ನಡುವೆ ಶಿಕ್ಷಣವು ಸಹ ಮಾರ್ಪಡಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹೊಸ ಹೊಸ ಸವಾಲು ಎದುರಿಸಲು ಕೇವಲ ವಿದ್ಯಾರ್ಥಿಗಳು ಮಾತ್ರ ತಯಾರಾದರೆ ಸಾಲದು. ಶಿಕ್ಷಕರು ಸಹ ಬೋಧನೆಯ ಕೌಶಲ ಹೊಂದುವುದು ಅವಶ್ಯಕ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಶಿಕ್ಷಣ ಮಂಡಳಿ ಪ್ರಾದೇಶಿಕ ಜಂಟಿ ನಿರ್ದೇಶಕ ಟಿ.ಎನ್. ಪ್ರಭಾಕರ, ಶೈಕ್ಷಣಿಕ, ಆಡಳಿತಾತ್ಮಕ ಮತ್ತಿತರ ವಿಷಯ ಕುರಿತು ಸಂವಾದ ನಡೆಸಿಕೊಟ್ಟರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರೊ. ಭಾಸ್ಕರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ. ಬಿ.ಎಸ್. ಶ್ರೀಕಂಠ, ಖಜಾಂಚಿ ಗೋವಿಂದಯ್ಯ, ಮಹಾಜನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಆರ್. ವಾಸುದೇವಮೂರ್ತಿ, ಮೈಸೂರು ವಲಯ ಪ್ರಾಂಶುಪಾಲರ ವೇದಿಕೆ ಅಧ್ಯಕ್ಷ ಪ್ರೊ. ಶಿವರಾಮು ಕಾಡನಕುಪ್ಪೆ ಹಾಗೂ ಪ್ರಾಂಶುಪಾಲ ಪ್ರೊ. ಕೆ.ವಿ. ಪ್ರಭಾಕರ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್