ಮೈಸೂರು

ಬಸವೇಶ್ವರ ವಚನಗಳು ಸಾರ್ವಕಾಲಿಕ

ಕ.ಪ್ರ.ವಾರ್ತೆ   ಕೆ.ಆರ್. ನಗರ   ಮೇ 13
ಬಸವೇಶ್ವರರ ವಚನಗಳು ಸರ್ವ ಕಾಲಕ್ಕೂ ಶ್ರೇಷ್ಠವಾಗಿದ್ದು, ಅವುಗಳನ್ನು ಪಾಲಿಸಿ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಬಸವೇಶ್ವರ ದೇವಾಲಯದ ಆವರಣದಲ್ಲಿ ಸೋಮವಾರ ನಡೆದ ಬಸವ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 12ನೇ ಶತಮಾನದಲ್ಲಿ ಸಮಾಜದಲ್ಲಿದ್ದ ಜಾತಿ ಪದ್ಧತಿ ತೊಡೆದು ಹಾಕಲು ಶ್ರಮಿಸಿದ ಮಹಾನ್ ಪುರುಷ ಬಸವಣ್ಣ. ಕಾಯಕ ಸಮಾಜದ ನಿರ್ಮಾಣಕ್ಕೆ ದುಡಿದ ವ್ಯಕ್ತಿಯಾಗಿದ್ದು, ಇವರ ಜೀವನ ಜಗತ್ತಿಗೆ ದಾರಿ ದೀಪ ಎಂದರು.
ಕಾಯಕವೇ ಕೈಲಾಸ ಎಂದು ವಿಶ್ವಕ್ಕೆ ಸಾರಿದ ಬಸವೇಶ್ವರರು ಸಮಾನತೆಯ ಹರಿಕಾರರಾಗಿ ಕಲ್ಯಾಣ ರಾಜ್ಯ ಸ್ಥಾಪನೆಯ ಕನಸು ಕಂಡಿದ್ದರು. ಇಂದು ನಾವು ಅವರ ವಚನಗಳ ಸಾರ ಗ್ರಹಿಸಿ ಉತ್ತಮ ಮಾರ್ಗದಲ್ಲಿ ನಡೆದರೆ ಅಂತಹ ಮಹಾತ್ಮನಿಗೆ ಗೌರವ ಸೂಚಿಸಿದಂತಾಗುತ್ತದೆ.
ಮಹನೀಯರ ಜಯಂತಿ ಕೇವಲ ಆಚರಣೆಗೆ ಸೀಮಿತವಾಗುತ್ತಿದ್ದು, ಅವರ ಹುಟ್ಟುಹಬ್ಬದಂದು ಗುಣಗಾನ ಮಾಡಿ ನಂತರ ಮರೆಯುವ ಸಂಸ್ಕೃತಿ ಬೆಳೆಯುತ್ತಿದೆ. ಇದು ಅಭಿವೃದ್ಧಿಗೆ ಮಾರಕವಾಗಿದ್ದು, ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದು ಸಮುದಾಯದ ಹಿತದೃಷ್ಟಿಯಿಂದ ಶರಣರು, ಕವಿಗಳು, ದಾರ್ಶನಿಕರ ಚಿಂತನೆ ಮೈಗೂಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಸವ ಭವನ ನಿರ್ಮಾಣಕ್ಕೆ ಈಗಾಗಲೇ ಹೊರವಲಯದಲ್ಲಿರುವ ತೋಪಮ್ಮ ದೇವಾಲಯದ ಪಕ್ಕ ಎರಡು ಕೋಟಿ ರು. ಬೆಲೆ ಬಾಳುವ ನಿವೇಶನ ಒದಗಿಸಲಾಗಿದ್ದು, ಶೀಘ್ರದಲ್ಲಿಯೇ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದಿಂದ, ಶಾಸಕರ ನಿಧಿಯಿಂದ ಅನುದಾನ ಕೊಡಿಸುವುದರ ಜತೆಗೆ ವೈಯಕ್ತಿಕವಾಗಿಯೂ ಧನ ಸಹಾಯ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ತಹಸೀಲ್ದಾರ್ ಬಿ.ಎನ್. ವೀಣಾ, ತಾಪಂ ಅಧ್ಯಕ್ಷೆ ಕವಿತಾ ರವಿ, ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿದರು. ಶಿಕ್ಷಕ ರಾಜಶೇಖರ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮೊದಲು ಬಸವೇಶ್ವರ ಮಹಿಳಾ ಮಂಡಳಿಯ ವತಿಯಿಂದ ವಚನ ಗಾಯನ ಏರ್ಪಡಿಸಲಾಗಿತ್ತು.
ತಾಪಂ ಸದಸ್ಯ ನಾಗಣ್ಣ, ಮಾಜಿ ಸದಸ್ಯ ಎ.ಟಿ. ಗೋವಿಂದೇಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಿಂಡಿಮ ಶಂಕರ್, ದಲಿತ ಮುಖಂಡ ಹನಸೋಗೆ ನಾಗರಾಜು, ವೀರಶೈವ ಮುಖಂಡ ಚೌಕಹಳ್ಳಿ ರಾಜಣ್ಣ, ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್ ವಕೀಲ ಸತೀಶ್, ಕೋಳೂರು ರಮೇಶ್, ಗೀತಾ ದೇವರಾಜು, ಸಿಪಿಐ ಪ್ರಸನ್ನಕುಮಾರ್ ಇದ್ದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ