ಮೈಸೂರು

ಕೆ.ಆರ್. ನಗರದಲ್ಲಿ ಸಡಗರದ ಬಸವ ಜಯಂತಿ

ಕ.ಪ್ರ.ವಾರ್ತೆ ,  ಕೆ.ಆರ್. ನಗರ ,  ಮೇ 14
ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ಸೋಮವಾರ ಸಂಜೆ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತಲ್ಲದೆ ಸಂಜೆ ಬಸವೇಶ್ವರ ಬಡಾವಣೆಯಿಂದ ಹೊರಟ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಮೈಸೂರು ರಸ್ತೆ, ಬಜಾರ್ ರಸ್ತೆ, 7ನೇ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರು ಬಸವಣ್ಣನವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಪೂಜಿಸಿದರು. ನಂತರ ಸ್ವಸ್ಥಾನಕ್ಕೆ ಮೆರವಣಿಗೆ ಬಂದ ನಂತರ ಮಹಾಮಂಗಳಾರತಿ ಮಾಡಲಾಯಿತು.
ಪುರಸಭಾ ಸದಸ್ಯ ಪಿ. ವಿನಯ್, ಶರಾವತಿ ಬಸಂತ್, ರೂಪ ಸತೀಶ್, ರೇಖಾರವೀಂದ್ರ, ಗೀತಾದೇವರಾಜ್, ಸುಚಿತ್ರ ದಿನೇಶ್, ಶೀಲಾ ಶಶಿಕುಮಾರ್, ಮುಖಂಡರಾದ ಅಜಯ್, ಸಿದ್ದೇಶ್, ಶರತ್‌ಬಾಬು, ಜತ್ತಿಪ್ರಕಾಶ್, ದಿನೇಶ್, ಸುನಿಲ್, ಮಂಜು, ರಘು, ಫಣೀಶ್, ಡೇರಿ ಬದ್ರಿ, ಕೆ.ಬಿ. ರಘು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!