ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಲು ಮನವಿ

Vishwanath S
Updated On : 16 May 2013, 12:03 pm

ಕ.ಪ್ರ.ವಾರ್ತೆ ,  ಬೈಲುಕುಪ್ಪೆ ,  ಮೇ 15
ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದರಿಂದ ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಮತದಾರರಲ್ಲಿ ಮನವಿ ಮಾಡಿದರು.
ಸಮೀಪದ ಕೊಪ್ಪ ಗ್ರಾಮದಲ್ಲಿ ಚುನಾವಣಾ ಪ್ರಚಾರ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಅದರಲ್ಲೂ ಹಿಂದುಳಿದ ವರ್ಗಗಳ ನಾಯಕ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ ತಾಲೂಕಿನ ಸಮಗ್ರ ಅಭಿವೃದ್ಧಿಯಾಗುವುದರಲ್ಲಿ ಯಾವುದೆ ಅನುಮಾನ ಬೇಡ. ಆದ್ದರಿಂದ ಎಲ್ಲ ದೀನ- ದಲಿತರು, ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲವಿಗಾಗಿ ಹಗಲಿರುಳು ಶ್ರಮಿಸಬೇಕು ಎಂದರು.
ಈ ವೇಳೆ ನೂರಾರು ಕಾರ್ಯಕರ್ತರು ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಜಿಪಂ ಸದಸ್ಯೆ ಕಾವೇರಿ ಶೇಖರ್, ತಾಪಂ ಸದಸ್ಯ ನವಿಲೂರು ಮಹದೇವ್, ಮುಖಂಡರಾದ ಬಿ.ಜೆ. ಬಸವರಾಜ್, ಅಣ್ಣಯ್ಯ, ಪ್ರಕಾಶ್, ರಾಜು, ಡಿ.ಜೆ. ಮಕ್ಬೂಲ್, ಅಜ್ಗರ್ ಪಾಷಾ, ನಜೀರ್, ಶೀರಾಜ್, ವಿನು, ರವಿ, ಸಂತೋಷ್, ಶಿವಕುಮಾರ್, ಇಮ್ರಾನ್, ಅರಿಫ್ ರೋಷನ್, ನಂದೀಶ್, ಗಿರಿ, ರಮೇಶ್, ರಾಣಿಯಮ್ಮ, ರಾಜಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement