ಮೈಸೂರು

ಇಂದು ವೃತ್ತಿ ಶಿಕ್ಷಣ ಮಾರ್ಗದರ್ಶನ

ಚಾಮರಾಜನಗರ: ಮೈಸೂರಿನ ಜೆಎಸ್‌ಎಸ್ ಮಹಾವಿದ್ಯಾಪೀಠ ಹಾಗೂ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯಗಳ ವತಿಯಿಂದ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೇ 16ರಂದು ಬೆಳಗ್ಗೆ 9.30ರಿಂದ ಚಾಮರಾಜನಗರದ ಜೆಎಸಎಸ್ ಮಹಿಳಾ ಕಾಲೇಜಿನಲ್ಲಿ ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ತಜ್ಞರು ವಿವಿಧ ಕೋರ್ಸ್‌ಗಳ ಬಗ್ಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದಾರೆ. ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಜೆಎಸ್‌ಎಸ್ ಹಾಸ್ಟೆಲ್‌ಗೆ ಪ್ರವೇಶ
ಕೊಳ್ಳೇಗಾಲ: ತಾಲೂಕಿನ ರಾಮಾಪುರದಲ್ಲಿ ನಡೆಸಲಾಗುತ್ತಿರುವ ಜೆಎಸ್‌ಎಸ್ ಖಾಸಗಿ ಮೆಟ್ರಿಕ್- ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ 2013- 14ನೇ ಸಾಲಿಗೆ ಪ್ರವೇಶ ಪಡೆಯಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಮೇ 31ರೊಳಗಾಗಿ ವಿದ್ಯಾರ್ಥಿನಿಲಯದ ನಿಲಯಪಾಲಕರಿಂದ ಅರ್ಜಿ ಪಡೆದು, ಭರ್ತಿ ಮಾಡಿ ತಲುಪಿಸುವಂತೆ ಜೆಎಸ್‌ಎಸ್ ಮಹಾವಿದ್ಯಾಪೀಠದ ಉಪಕಾರ್ಯದರ್ಶಿ ಎನ್. ಶಿವಕುಮಾರಸ್ವಾಮಿ ಕೋರಿದ್ದಾರೆ.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮೈಸೂರು: ದಿ ಮೈಸೂರು ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಬ್ಯಾಂಕ್ ವತಿಯಿಂದ ಪ್ರೋತ್ಸಾಹಧನ ನೀಡಲಿದೆ ಎಂದು ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರು ಹೇಳಿದ್ದಾರೆ. ಸದಸ್ಯರ ಮಕ್ಕಳು ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದ ತಲಾ 20 ವಿದ್ಯಾರ್ಥಿಗಳಿಗೆ ಕ್ರಮವಾಗಿ 1,500 ಹಾಗೂ 2 ಸಾವಿರಗಳನ್ನು ಹಾಗೂ ಜಿಲ್ಲಾ, ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ್ದ ಮೂವರಿಗೆ ಎರಡು ಸಾವಿರ ರು. ಕ್ರೀಡಾ ಪ್ರೋತ್ಸಾಹಧನ ನೀಡಲಿದೆ. ಈ ಸಂಬಂಧ ಅರ್ಜಿಯನ್ನು ಅಂಕಪಟ್ಟಿಯ ಪ್ರತಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಮೇ 27ರೊಳಗೆ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರಿಗೆ ಸಲ್ಲಿಸುವುದು.

ಶಿಕ್ಷಕರ ಮಕ್ಕಳಿಗೆ ಪುರಸ್ಕಾರ
ಮೈಸೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ತಾಲೂಕು ವ್ಯಾಪ್ತಿಯ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮಕ್ಕಳ ಪೈಕಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಅಭಿನಂದಿಸಲಾಗುವುದು ಎಂದು ಸಂಘದ ಅಧ್ಯಕ್ಷ ಜಿ.ವಿ. ನಾಗೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ಜವರೇಗೌಡ ಹೇಳಿದ್ದಾರೆ. ಜೂ. 1 ರೊಳಗಾಗಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ನೇರವಾಗಿ ಅಥವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಮುಖಾಂತರ ಅಂಕಪಟ್ಟಿಯ ಪ್ರತಿ ಮತ್ತು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸುವಂತೆ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9945623596 ಸಂಪರ್ಕಿಸಬಹುದು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮೈಸೂರು: ಶ್ರೀರಾಂಪುರದ 2ನೇ ಹಂತದಲ್ಲಿನ ಮಧುವನ ಬಡಾವಣೆಯ ಆದರ್ಶ ಸೇವಾ ಸಂಘದ ವತಿಯಿಂದ ಡಾ. ಮೀರಾ ವಿ. ನಾಥನ್ ಅವರ ಸಹಕಾರದೊಂದಿಗೆ ನಗರದ ವಿದ್ಯಾಸಂಸ್ಥೆಗಳಲ್ಲಿ ಎಸ್ಸೆಸ್ಸೆಲ್ಸಿ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ 2013- 14ನೇ ಸಾಲಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಹ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಮೇ 20 ರಿಂದ ಜೂ. 10 ರವರೆಗೆ ಸಂಘದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯೊಳಗೆ ನಿಗದಿತ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜೂ. 25ರ ಸಂಜೆ 5 ಗಂಟೆಯೊಳಗೆ ಸಂಘದ ಕಚೇರಿಗೆ ತಲುಪಿಸಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!