ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸರ್ಕಾರಿ ಶಾಲೆ ಮುಚ್ಚುವುದಕ್ಕೆ ವಿರೋಧ

Vishwanath S
Updated On : 16 May 2013, 12:03 pm

ಕ.ಪ್ರ.ವಾರ್ತೆ ,  ಕೆ.ಆರ್. ನಗರ ,  ಮೇ 15
ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ 3,500 ಸರ್ಕಾರಿ ಶಾಲೆ ಮುಚ್ಚಲು ತೀರ್ಮಾನಿಸಿ ಅವುಗಳಲ್ಲಿ ಈಗಾಗಲೇ ಕೆಲವನ್ನು ಮುಚ್ಚಿದ್ದು, ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದು, ಶಾಲೆಗಳನ್ನು ಮುಚ್ಚಬಾರದು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಒತ್ತಾಯಿಸಿದರು.
ಕಡಿಮೆ ಸಂಖ್ಯೆಯ ಮಕ್ಕಳಿರುವ ಶಾಲೆಗಳನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಬದಲು ಆ ಶಾಲೆಗಳಿಗೆ ಮೂಲ ಸೌಕರ್ಯ ಮತ್ತು ಅಗತ್ಯ ಶಿಕ್ಷಕರನ್ನು ನೇಮಿಸಿ ಪ್ರೋತ್ಸಾಹ ನೀಡಿದರೆ ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಒದಗಿಸಬಹುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದುರಾಡಳಿತ ನಡೆಸಿದ ಬಿಜೆಪಿ ಸರ್ಕಾರ ಮಾಡಿರುವ ಕೊಳಕುಗಳನ್ನು ಸರಿಪಡಿಸಿ ಆಡಳಿತದಲ್ಲಿ ಸುಧಾರಣೆ ತರಬೇಕಾಗಿದೆ. ದಕ್ಷ ಪ್ರಮಾಣಿಕ ಆಡಳಿತಗಾರ ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಉದ್ದೇಶದಿಂದ ಜನತೆ ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಆದ್ದರಿಂದ ಜನರ ನಿರೀಕ್ಷೆಗೆ ತಕ್ಕಂತೆ ಉತ್ತಮ ಆಡಳಿತ ನೀಡಬೇಕೆಂದು ಮನವಿ ಮಾಡಿದರು.  
ಕೆಜೆಪಿ ರಾಜ್ಯ ಕಾರ್ಯದರ್ಶಿಯಾಗಿದ್ದ ತಮ್ಮನ್ನು ಪಕ್ಷ ಕಡೆಗಣಿಸಿ ಕನಿಷ್ಠ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗಲೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಇದರಿಂದ ನಾನು ಪಕ್ಷದ ಹುದ್ದಗೆ ರಾಜಿನಾಮೆ ಸಲ್ಲಿಸಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಫ್ಯಾಕ್ಸ್ ಮೂಲಕ ರಾಜಿನಾಮೆ ಪತ್ರ ರವಾನಿಸಿದ್ದೇನೆ ಎಂದು ತಿಳಿಸಿದ ಅವರು, ಮುಂದೆ ಸಮಾಜ ಸೇವೆಯಲ್ಲಿ ತೊಡಗುವುದಾಗಿ ಪ್ರಕಟಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement