ಮೈಸೂರು

ಕಾಳಿಕಾಂಬ ರಥೋತ್ಸವ

ಸಾಲಿಗ್ರಾಮ: ಕಾಳಮ್ಮನಕೊಪ್ಪಲು ಗ್ರಾಮದಲ್ಲಿ ಅತ್ಯಂತ ವಿಜೃಂಭಣೆಯಿಂದ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ಕಾಳಿಕಾಂಬ ರಥೋತ್ಸವವು ಶುಕ್ರವಾರ ನಡೆಯಿತು. ಗ್ರಾಮದ ಹೆಣ್ಣು ಮಕ್ಕಳಿಂದ ಕುಂಭಕಳಸಗಳು ಹಾಗೂ ಮಂಗಳ ವಾದ್ಯದೊಂದಿಗೆ ಗ್ರಾಮದಲ್ಲಿ ಶ್ರೀ ಕಾಳಮ್ಮ ದೇವರನ್ನು ಮೆರವಣಿಗೆ ಮಾಡಿ ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದ ಅಂಗವಾಗಿ ಗ್ರಾಮದಲ್ಲಿ ವಿವಿಧ ಸಾಂಸ್ಕೃತಿಕ ಕಲಾಪ್ರಕಾರಗಳನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ನಡೆಸುವುದರ ಮೂಲಕ ಸಾಂಸ್ಕೃತಿಕ ವೈಭವ ಮೆರೆಯಲಾಯಿತು. ರಥೋತ್ಸವದಲ್ಲಿ ಗ್ರಾಮದ ಜನತೆ ಹಾಗೂ ಸುತ್ತಮುತ್ತಲಿನ ಸಾವಿರಾರು ಜನರು ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಥಕ್ಕೆ ಹಣ್ಣು ಜವನವನ್ನು ಎಸೆಯುವುದರ ಮೂಲಕ ಪ್ರಾರ್ಥಿಸಿದರು. ರಥೋತ್ಸವದ ಅಂಗವಾಗಿ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕ ಅಭಿನಯಿಸಲಾಯಿತು. ರಥೋತ್ಸವದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಿತ್ ವಿ. ದೇವರಹಟ್ಟಿ, ಎಪಿಎಂಸಿ ಮಾಜಿ ನಿರ್ದೇಶಕ ಹೆಬ್ಬಾಳು ರಾಜಶೇಖರ್, ಅಹಿಂದ ಮುಖಂಡ ದೆಗ್ಗನಾಳು ದಿನೇಶ್, ಗ್ರಾಪಂ ಅಧ್ಯಕ್ಷೆ ಬಿ.ಕೆ. ಭವ್ಯ ಬಲರಾಮ್, ಸದಸ್ಯರಾದ ಮರೀಗೌಡ, ಡಿ.ಕೃಷ್ಣ, ಸುಶೀಲಮ್ಮ ರಂಗಪ್ಪ, ಮಾಜಿ ಸದಸ್ಯರಾದ ಕೋಮಲಾಚಾರಿ, ಕೆ.ಎಸ್. ಕೃಷ್ಣೇಗೌಡ, ಮುಖಂಡರಾದ ಸಾಲಿಗ್ರಾಮ ಬಲರಾಮ್, ಕೆ.ಆರ್. ಮಂಜುನಾಥ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!