ಜೆಡಿಎಸ್ ಪರ ಮತಯಾಚನೆ
ಪಿರಿಯಾಪಟ್ಟಣ: ಪಿರಿಯಾಪಟ್ಟಣ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಜೆಡಿಎಸ್ನತ್ತ ನೋಡುತ್ತಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್ ಹೇಳಿದರು. ತಾಲೂಕಿನ ಕಿರನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ. ಮಹದೇವ್ ಪರವಾಗಿ ಮತಯಾಚಿಸಿ ಮಾತನಾಡಿ, ಕ್ಷೇತ್ರದ ಜನರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಕೆ. ವೆಂಕಟೇಶ್ ಬಗ್ಗೆ ಅಸಮಾಧಾನ ಕಂಡುಬಂದಿದೆ.
ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ, ಅಷ್ಟೇ ಜವಾಬ್ದಾರಿ ಪ್ರತಿಪಕ್ಷಕ್ಕೂ ಇರುತ್ತದೆ. ಈ ನಿಟ್ಟಿನಲ್ಲಿ ಸದನದಲ್ಲಿ ಜೆಡಿಎಸ್ ಪ್ರತಿಪಕ್ಷದ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲಿದ್ದು, ಪಕ್ಷದ ಅಭ್ಯರ್ಥಿ ಕೆ. ಮಹದೇವ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಜಿಪಂ ಸದಸ್ಯ ಎಸ್.ಎ. ಶಿವಣ್ಣ, ತಾಪಂ ಸದಸ್ಯ ಆರ್.ಎಸ್. ಮಹದೇವ್ ಇದ್ದರು.