ಸಮರ್ಥ ಪ್ರತಿಪಕ್ಷವಾಗಿ ಕಾರ್ಯನಿರ್ವಹಣೆ: ರವಿ
ಪಿರಿಯಾಪಟ್ಟಣ: ಬಿಜೆಪಿ ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಆಡಳಿತ ಪಕ್ಷವನ್ನು ಎಚ್ಚರಿಸುವ ನಿಟ್ಟಿನಲ್ಲಿ ಪಕ್ಷ ಸಮರ್ಪಕವಾಗಿ ಕೆಲಸ ನಿರ್ವಹಿಸಲಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.ಇಲ್ಲಿನ ವಿವಿಧ ಬಡಾವಣೆಗಳಲ್ಲಿ ಮನೆ ಮತ್ತು ಆಂಗಡಿಗಳಿಗೆ ತೆರಳಿ ಬಿಜೆಪಿ ಅಭ್ಯರ್ಥಿ ಆರ್.ಟಿ. ಸತೀಶ್ ಪರವಾಗಿ ಮತಯಾಚಿಸಿ ಮಾತನಾಡಿ, ಪಕ್ಷದ ಅಭ್ಯರ್ಥಿ ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸಲಿದ್ದು,
ತಾವು ಸಹಾ ಅವರೊ ದಿಗೆ ತಾಲೂಕಿಗೆ ಅಗತ್ಯವಿರುವ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸಲಿದ್ದು, ಪಕ್ಷದ ಅಭ್ಯರ್ಥಿ ಆರ್.ಟಿ. ಸತೀಶ್ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿದರು. ಪದಾಧಿಕಾರಿಗಳಾದ ವಕೀಲ ಎಸ್.ಟಿ. ಕೃಷ್ಣಪ್ರಸಾದ್, ಪಿ.ಜೆ. ರವಿ, ರಮೇಶ್, ಕುಮಾರಸ್ವಾಮಿ, ಸುದರ್ಶನ್ ಸೋಹನ್ ಇದ್ದರು.