139 ಮಂದಿ ತಪಾಸಣೆ
ಮೈಸೂರು: ಡಿ. ಸಾಲುಂಡಿ ಗ್ರಾಮದಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿರುವುದರಿಂದ ಸರ್ಕಾರಿ ಶಾಲೆಯಲ್ಲಿ ತುರ್ತು ಚಿಕಿತ್ಸಾ ಘಟಕ ತೆರೆಯಲಾಗಿದ್ದು, ಬೆಳಗ್ಗೆಯಿಂದ ಸಂಜೆವರೆಗೆ ಒಟ್ಟು 139 ಮಂದಿಯನ್ನು ತಪಾಸಣೆ ಮಾಡಲಾಯಿತು.
ಅವರಲ್ಲಿ ಡೆಂಘೀ ರೋಗ ಲಕ್ಷಣವುಳ್ಳ 11 ಮಕ್ಕಳನ್ನು ನಗರದ ಚೆಲುವಾಂಬ ಆಸ್ಪತ್ರೆಗೆ ವರ್ಗಾಯಿಸಲಾಯಿತು.
ಅವರ ರಕ್ತ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ಐದು ಮಂದಿಗೆ ಡೆಂಘೀ ಇರುವುದು ಪತ್ತೆಯಾಗಿದೆ. ಧನಗಳ್ಳಿ ಗ್ರಾಮದ ಎಂ. ನಾಯಕ್ (7), ಗುಣವತಿ (13), ಚೆನ್ನಮ್ಮ (9), ಕೆಂಚಲಗೂಡಿನ ದೀಪು (8), ದೇವಗಳ್ಳಿಯ ತೇಜಸ್ವಿನಿ (11) ಡೆಂಘೀಗೆ ತುತ್ತಾವರಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.