ಅಭಿವೃದ್ಧಿ ಕಾರ್ಯಕ್ಕೆ ಪ್ರಚಾರ ನೀಡದ್ದರಿಂದ ಸೋಲು: ಜೋಶಿ
ಪಿರಿಯಾಪಟ್ಟಣ: ಈ ಹಿಂದೆ ಬಿಜೆಪಿ ಸರ್ಕಾರ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಪ್ರತಿಬಿಂಬಿಸುವಲ್ಲಿ ವಿಫಲವಾಗಿದ್ದೆ ಪಕ್ಷದ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು.
ಪಕ್ಷದ ಅಭ್ಯರ್ಥಿ ಆರ್.ಟಿ. ಸತೀಶ್ ಪರವಾಗಿ ಪಟ್ಟಣದಲ್ಲಿ ಮತಯಾಚಿಸಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಈ ಹಿಂದೆ ಯಾರು ಮಾಡದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೆ, ಮತದಾರರಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ತಲುಪಿಸುವಲ್ಲಿ ವಿಫಲವಾಗಿದೆ ಎಂದು ತಿಳಿಸಿದರು.
ಈಗಾಗಲೇ ಮತದಾರರು ಶಿಕ್ಷೆ ನೀಡಿದ್ದು, ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಆರ್.ಟಿ. ಸತೀಶ್, ವಿಧಾನಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್, ರಮೇಶ್, ಬಿ.ಎಸ್. ರಾಮಚಂದ್ರ, ವಕೀಲ ಕೃಷ , ಪ್ರಸಾದ್, ಪುಟ್ಟಸ್ವಾಮಿ, ಟಿ. ರಮೇಶ್, ವಿಕ್ರಂರಾಜ್, ಪ್ರಸನ್ನಕೇಶವ, ಲೋಕಪಾಲಯ್ಯ, ಸುದರ್ಶನ್, ಪಿ.ಜೆ. ರವಿ, ಪಿ.ಬಿ. ಶ್ರೀನಿವಾಸ್ ಇದ್ದರು.