ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆ ಸಂಭವ

Vishwanath S
Updated On : 24 May 2013, 11:49 am

ಕ.ಪ್ರ.ವಾರ್ತೆ  ,   ಮೈಸೂರು  ,   ಮೇ 24
ಜಿಲ್ಲೆಯಲ್ಲಿ ಮೇ 25ರಿಂದ 28 ರವರೆಗೆ ಚದುರಿದಂತೆ ಅಲ್ಲಲ್ಲಿ ತುಂತುರುವಿನಿಂದ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ಸಮಗ್ರ ಕೃಷಿ ಹವಾಮಾನ ವಿಭಾಗದ ಕ್ಷೇತ್ರಾಧೀಕ್ಷಕ ಡಾ.ಸಿ. ಗೋವಿಂದರಾಜು ಹಾಗೂ ಸಹ ಸಂಶೋಧಕ ಎನ್. ನರೇಂದ್ರಬಾಬು ಹೇಳಿದ್ದಾರೆ.
ರೈತರಿಗೆ ಸಲಹೆಗಳು: ಕೃಷಿ ಚಟುವಟಿಕೆಗಳ ಬಗ್ಗೆ ಅನುಸರಿಸಬಹುದಾದ ವಿವರ, ತೋಟಗಾರಿಕೆ ಬೆಳೆಗಳಿಗೆ ಪಾತಿ ಮಾಡಿ, ಶಿಫಾರಸು ಮಾಡಿದ ಪ್ರಮಾಣದಲ್ಲಿ ರಸಗೊಬ್ಬರಗಳನ್ನು ಎರಡು ಸಮ ಕಂತುಗಳಲ್ಲಿ ಬುಡದಿಂದ ಮೂರು ಅಡಿ ಅಂತರದಲ್ಲಿ ಕಂದಕ ಮಾಡಿ ರಸಗೊಬ್ಬರ ಕೊಟ್ಟು ಹೊದಿಗೆ ಹೊದಿಸುವುದು.
ಸಾಕಷ್ಟು ಮಳೆ ಬಂದಿರುವ ಪ್ರದೇಶಗಳಲ್ಲಿ ಜಮೀನನನ್ನು ರೈತರು ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡಿ, ಬಿತ್ತನೆಗೆ ಸೂಕ್ತ ರೀತಿಯಲ್ಲಿ ತಯಾರಿಸಿಕೊಳ್ಳುವುದು. ಮಾಹಿತಿಗಾಗಿ ಸಂಪರ್ಕಿಸಬಹುದು. ಮೊ. 8095227713.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement