'ಕೈ' ಗೆಲ್ಲಿಸಲು ಮನವಿ
ಪಿರಿಯಾಪಟ್ಟಣ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಪಕ್ಷದ ಅಭ್ಯರ್ಥಿ ಕೆ. ವೆಂಕಟೇಶ್ ಅವರು ಗೆದ್ದುಬಂದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬದನ್ನು ಮತದಾರರು ಮರೆಯಬಾರದು ಎಂದು ಜಿಪಂ ಸದಸ್ಯೆ ಮಂಜುಳಾರಾಜ್ ಹೇಳಿದರು. ತಾಲೂಕಿನ ಮರದೂರು ಕೊಪ್ಪಲು ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಕೆ. ವೆಂಕಟೇಶ್ ಪರವಾಗಿ ಮತಯಾಚಿಸಿ ಮಾತನಾಡಿ, ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಅಧಿಕಾರ ನೀಡಿದ್ದು, ಹೆಚ್ಚಿನ ಅಭಿವೃದ್ಧಿ ನಿರೀಕ್ಷಿಸುತ್ತಿದ್ದಾರೆ. ಅಂತೆಯೇ ತಾಲೂಕಿನಲ್ಲಿ ಹಲವಾರು ಬಾರಿ ಶಾಸಕರಾಗಿ ಒಂದು ಬಾರಿ ಮಂತ್ರಿಯಾಗಿ ಕೆಲಸ ನಿರ್ವಹಿಸಿದ್ದ ಮಾಜಿ ಶಾಸಕ ಕೆ. ವೆಂಕಟೇಶ್ ಅವರನ್ನು ಗೆಲ್ಲಿಸಿದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದ್ದು, ಮತದಾರರು ಅತಿ ಹೆಚ್ಚಿನ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ತಾಪಂ ಸದಸ್ಯೆ ಸರಸ್ವತಿ, ಮುಖಂಡರಾದ ಕೃಷ್ಣಪ್ಪ, ವೆಂಕಟೇಶ್ ಇದ್ದರು.