ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸುಮೋ ಡಿಕ್ಕಿ: ಸೈಕಲ್ ಸವಾರ ಸಾವು

Rashmi Kasaragodu
Updated On : 28 May 2013, 12:12 pm

ಮೈಸೂರು: ಟಾಟಾ ಸುಮೋ ಡಿಕ್ಕಿಯಾಗಿ ಸೈಕಲ್ ಸವಾರ ಮೃತಪಟ್ಟಿರುವ ಘಟನೆ ದಟ್ಟಗಳ್ಳಿ ವರ್ತುಲ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ರಾಮನಗರ ಜಿಲ್ಲೆ ಕನಕಪುರ ಮೂಲದ ನಿವಾಸಿ ನಂಜುಂಡೇಗೌಡ (70) ಮೃತಪಟ್ಟವರು. ಇವರು ಗಾರೆಕೆಲಸಕ್ಕಾಗಿ ಮೈಸೂರಿನ ದಟ್ಟಗಳ್ಳಿಗೆ ಬಂದಿದ್ದರು. ಸೈಕಲ್ನಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಸುಮೋ ವಾಹನ ಡಿಕ್ಕಿಯಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂಬಂಧ ಕುವೆಂಪುನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement