ಪ್ರೊಫೆಸರ್ಗಳ ವಿರುದ್ಧ ವರದಿ ಸಲ್ಲಿಕೆ
ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರೊಫೆಸರ್ ವಿರುದ್ಧ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿ ವಿಚಾರಣೆ ನಡೆಸಿ ವರದಿಯನ್ನು ಮಂಗಳವಾರ ಸಲ್ಲಿಸಿದೆ. ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಹಾಸನದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಪ್ರೊ. ರಂಗರಾಜು ಮತ್ತು ಪ್ರೊ. ಶಿವಪ್ಪ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಈ ಕುರಿತ ಕ್ರಮವನ್ನು ಮುಂದಿನ ಸಿಂಡಿಕೇಟ್ ಸಭೆಯಲ್ಲಿ ತಿಳಿಸಲಾಗುವುದು ಎಂದು ತೀರ್ಮಾನಿಸಲಾಗಿದೆ.