ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಎಪಿಎಂಸಿಗೆ ನೇರ ನೇಮಕಾತಿಗೆ ಆಗ್ರಹ

Rashmi Kasaragodu
Updated On : 30 May 2013, 11:48 am

ಟಿ. ನರಸೀಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೇರವಾಗಿ ನೌಕರರನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹೊರಗುತ್ತಿಗೆ ನೌಕರರ ಸಂಘಟನೆ ಆಗ್ರಹಿಸಿದೆ.
ಏಜೆನ್ಸಿಗಳ ಮೂಲಕ ನೌಕರರನ್ನು ನೇಮಕ ಮಾಡಿಕೊಳ್ಳುತ್ತಿರುವ ಪದ್ಧತಿಯಿಂದಾಗಿ ನೌಕರರಿಗೆ ಇಎಸ್ಐ ಹಾಗೂ ಪಿಎಫ್ ಸೌಲಭ್ಯ ಲಭ್ಯವಾಗುತ್ತಿಲ್ಲ. ಅಲ್ಲದೆ, ವೇತನವನ್ನು ಸರಿಯಾಗಿ ನೀಡದೆ ದುಡಿಸಿಕೊಳ್ಳಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಶಿವರಾಮ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಹೋರಾಟದ ಹಿನ್ನೆಲೆಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಹಾಲಿ ಇರುವ ಹೊರಗುತ್ತಿಗೆ ನೌಕರರನ್ನು ಸೇವೆಯಲ್ಲಿ ಕಾಯಂಗೊಳಿಸಿ, ನೂತನ ನೌಕರರನ್ನು ನೇರವಾಗಿ ನೇಮಕ ಮಾಡಿಕೊಳ್ಳಲು ಆದೇಶ ನೀಡಬೇಕು ಎಂದು ಶಿವರಾಮ್ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement