ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಡೆಂಘೀ ತಡೆಗೆ ಮುನ್ನೆಚರಿಕೆ ಕ್ರಮ

Rashmi Kasaragodu
Updated On : 30 May 2013, 11:49 am

ಕ.ಪ್ರ.ವಾರ್ತೆ   ಟಿ.ನರಸೀಪುರ   ಮೇ 30
ಕಿರಗಸೂರು ಗ್ರಾಪಂ ವ್ಯಾಪ್ತಿಯಲ್ಲಿ ಡೆಂಘೀ ಜ್ವರ ಹರಡದಂತೆ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಗಿದೆ ಎಂದು ಗ್ರಾಪಂ ಅಧ್ಯಕ್ಷ ಎಂ. ಪ್ರಕಾಶ್ ಹೇಳಿದರು.
ತಾಲೂಕಿನ ಕಿರಗಸೂರು ಗ್ರಾಪಂ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಮೂವರು ಶಂಕಿತ ಡೆಂಘೀ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ಕಳೆದ ಬುಧವಾರದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ತಾಪಂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಸಲಹೆಯಂತೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕರಪತ್ರ ಮುದ್ರಿಸಿ ಹಂಚಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಿಗೆ ತೆರಳಿ ಮಕ್ಕಳಿಗೆ ನೀಡುವ ಆಹಾರದಲ್ಲಿ ಗುಣಮಟ್ಟ ಮತ್ತು ಸ್ವಚ್ಛತೆ ಕಾಪಾಡುವಂತೆ ತಾಕೀತು ಮಾಡಿದ್ದೇವೆ. ಆರೋಗ್ಯ ಇಲಾಖೆಯ ಸರ್ವೇ ಕೆಲಸಕ್ಕೂ ಪಂಚಾಯಿತಿ ಆಡಳಿತ ಪೂರ್ಣ ಸಹಕಾರ ನೀಡುತ್ತಿದೆ ಎಂದು ಪ್ರಕಾಶ್ ವಿವರಿಸಿದರು.
ಉಪಾಧ್ಯಕ್ಷೆ ಚಿಕ್ಕತಾಯಮ್ಮ, ಪಿಡಿಒ ಸಿದ್ದರಾಜು, ಮಾಜಿ ಉಪಾಧ್ಯಕ್ಷ ಆರ್. ಮಹದೇವ, ಸದಸ್ಯರಾದ ಮಹದೇವಪ್ಪ, ದೇವರಸನಾಯಕ, ಬಸವರಾಜು, ಚಂದ್ರಕಲಾ, ಚಂದ್ರಮ್ಮ, ಭಾಗ್ಯಮ್ಮ, ಮಹದೇವಮ್ಮ, ಶೀನಪ್ಪ, ಮೀನಾಕ್ಷಿ ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement