ಡೆಂಘೀ: ನಾಳೆ ಅಧಿಕಾರಿಗಳ ಸಭೆ
ಕೆ.ಆರ್. ನಗರ: ಇಲ್ಲಿನ ತಾಪಂ ಸಭಾಂಗಣದಲ್ಲಿ ಜೂ. 1ರಂದು ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಡೆಂಘೀ, ಕಾಲರಾ, ಮಲೇರಿಯಾ ಮತ್ತು ಇತರ ಸಾಂಕ್ರಾಮಿಕ ರೋಗ ತಡೆಗಟ್ಟಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ. ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಸೇರಿದಂತೆ ಇತರ ಎಲ್ಲ ಅಧಿಕಾರಿ ವರ್ಗದವರು ಸಭೆಯಲ್ಲಿ ಭಾಗವಹಿಸುವರು.