ನಗರದಲ್ಲಿ ವರುಣನ ಅಬ್ಬರ
ಮೈಸೂರು: ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಜೋರು ಮಳೆ ಆರಂಭವಾಗಿದ್ದು, ರಾತ್ರಿ ಸಹ ಮುಂದುವರಿದೆ.ನಗರದ ವಿವಿಧ ಬಡಾವಣೆಗಳಲ್ಲಿ ಜೋರು ಮಳೆಯಾಗಿದ್ದು, ಅಲ್ಲಲ್ಲಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ದುರ್ಬಲ ಕೊಂಬೆಗಳು ಮಳೆಯ ರಭಸಕ್ಕೆ ಮುರಿದು ಬಿದ್ದಿವೆ. ಸೀತಾವಿಲಾಸ ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್ ಎದುರು ಬೇವಿನ ಮರದ ಕೊಂಬೆ ತಾಗಿ ವಿದ್ಯುತ್ ಕಂಬದಲ್ಲಿ ಬೆಂಕಿ ಹೊತ್ತುಕೊಡಿತು. ಬೆಂಕಿ ಹೆಚ್ಚಾಗುತ್ತಿದ್ದಂತೆ ವಿದ್ಯುತ್ ಕಡಿತಗೊಂಡಿತು. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸೆಸ್ಕ್ ಸಿಬ್ಬಂದಿ ಕೊಂಬೆಯನ್ನು ತೆಗೆದು, ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.
ಜಿಲ್ಲೆಯಲ್ಲಿ... ಪಿರಿಯಾಪಟ್ಟಣ, ಹುಣಸೂರು, ಕೆ.ಆರ್. ನಗರ, ಎಚ್.ಡಿ. ಕೋಟೆ, ಟಿ. ನರಸೀಪುರ, ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಮಳೆಯಾಗಿದೆ.ಪಿರಿಯಾಪಟ್ಟಣದಲ್ಲಿ ಮಧ್ಯಾಹ್ನ ಆರಂಭವಾದ ಮಳೆಯೂ ರಾತ್ರಿಯೂ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿದೆ. ಹುಣಸೂರು ತಾಲೂ ಕಿನ ಬಿಳಿಕೆರೆ ಸುತ್ತಮುತ್ತವೂ ಜೋರು ಮಳೆಯಾಗಿದ್ದು, ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಸಣ್ಣಪುಟ್ಟ ಹಾನಿ ಉಂಟಾಗಿದೆ.