ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

ಸಣ್ಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆ ಪುನಾರಂಭಕ್ಕೆ ಮನವಿ

Rashmi Kasaragodu
Updated On : 1 Jun 2013, 12:04 pm

ಕ.ಪ್ರ.ವಾರ್ತೆ   ಮೈಸೂರು   ಮೇ 31
ಎರಡು ದಶಕಗಳ ಹಿಂದೆ ಮುಚ್ಚಲಾದ ಮೈಸೂರಿನ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಕೇಂದ್ರವನ್ನು ಪುನಾರಂಭಿಸುವಂತೆ ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಅವರು ಕೇಂದ್ರ ಸಣ್ಣ ಕೈಗಾರಿಕಾ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದರು.
ದೆಹಲಿಯ ಉದ್ಯೋಗ ಭವನದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ, ಮೈಸೂರು, ಮಂಡ್ಯ, ಚಾಮರಾಜನಗರಹಾಗೂ ಹಾಸನ ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರಗತಿ ತೀವ್ರಗತಿಯಲ್ಲಿರುವಾಗ, ರಾಜ್ಯ ಸರ್ಕಾರ ಹೊಸ ಕೈಗಾರಿಕಾ ಪ್ರದೇಶ ಮತ್ತು ವಸಾಹತುಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಭಾರತ ಸರ್ಕಾರದ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಕೇಂದ್ರ ಮೈಸೂರಿಗೆ ಅಗತ್ಯವಾಗಿದೆ.
ಈಗಾಗಲೇ ನಾಲ್ಕು ಕೈಗಾರಿಕಾ ಕ್ಲಸ್ಟರ್ಗಳು ಪ್ರಾರಂಭದ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಈ ಕೇಂದ್ರದ ಅಗತ್ಯವಿದೆ.
ಪ್ರಾರಂಭ ಹಂತದಲ್ಲಿ ಈ ಕೇಂದ್ರ ಅಗತ್ಯವಾದ ಸ್ಥಳಾವಕಾಶವನ್ನು ಮೈಸೂರು ಕೈಗಾರಿಕೆಗಳ ಸಂಘ ಒದಗಿಸಿಕೊಡಲಿದೆ ಎಂದು ಅಧ್ಯಕ್ಷ ಪಿ. ವಿಶ್ವನಾಥ್ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ನಿಯೋಗದ ಮನವಿ ಸ್ವೀಕರಿಸಿ ಜಿಲ್ಲೆಯ ಕೈಗಾರಿಕಾಭಿವೃದ್ಧಿ ಪ್ರಗತಿ ಬಗ್ಗೆ ವಿಚಾರ ವಿನಿಮಯ ಮಾಡಿದ ಸಚಿವ ಮುನಿಯಪ್ಪ, ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement