ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಮೈಸೂರು

11 ವರ್ಷದ ಹಿಂದಿನ ಕೊಲೆ ಆರೋಪಿ ಸಿಕ್ಕಿಬಿದ್ದ

Rashmi Kasaragodu
Updated On : 1 Nov 2013, 11:51 am

ನಂಜನಗೂಡು: ಹನ್ನೊಂದು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ತಾಲೂಕಿನ ಕೌಲಂದೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಹಳೇಪುರ ಗ್ರಾಮದಲ್ಲಿ ಶೀಲ ಶಂಕಿಸಿ ತನ್ನ ಪತ್ನಿಯನ್ನೇ ಅಮಾನುಷವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಮಹದೇವಶೆಟ್ಟಿ (45) ಎಂಬಾತನೇ ಬಂಧಿತ ಆರೋಪಿ.
2003 ಫೆ.13ರಲ್ಲಿ ಆರೋಪಿ ಪತ್ನಿ ರೇವಮ್ಮ (30)ಳನ್ನು ಕುಡಿದ ಅಮಲಿನಲ್ಲಿ ಕೊಲೆ ಮಾಡಿದ್ದ. ಆಕೆಯೊಂದಿಗೆ ಜಗಳವಾಡಿ ಆಕೆ ಕೆಳಗೆ ಬಿದ್ದಾಗ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನೆಂದು ಆರೋಪಿಸಲಾಗಿತ್ತು.
ಆರೋಪಿ ಪೊಲೀಸರ ಕಣ್ತಪ್ಪಿಸಿ ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡುತ್ತ ಜೀವನ ನಡೆಸುತ್ತಿದ್ದ. ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರು ಗ್ರಾಮದ ತೋಟದಲ್ಲಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹದೇವಶೆಟ್ಟಿ ಪತ್ನಿಯನ್ನು ಕೊಲೆ ಮಾಡಿದ ನಂತರ, ಬೇರೊಬ್ಬಳನ್ನು ವಿವಾಹವಾಗಿ ಜೀವನ ನಡೆಸುತ್ತಿದ್ದ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಎಸ್ಪಿ ಡಾ.ರಾಜ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಜಿ.ಎಸ್. ರಘು, ಎಸ್ಐ ಮಹೇಶ್ ಮತ್ತು ಸಿಬ್ಬಂದಿ ವರ್ಗದವರು ಆರೋಪಿಯನ್ನು ಬಂಧಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement